LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ: ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಅಲೆಮಾರಿ, ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.

ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in    ವೆಬ್‍ಸೈಟ್ ಮೂಲಕ ಅರ್ಜಿ  ಸಲ್ಲಿಸಬಹುದು.

ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‍ಸೈಟ್ ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ದೂರವಾಣಿ ಸಂಖ್ಯೆ 1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026