LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಲಾ ಕಟ್ಟಡ ಕುಸಿದು 4 ಮಕ್ಕಳ ದಾರುಣ ಸಾವು – ಅವಶೇಷಗಳ ಅಡಿ ಸಿಲುಕಿದ 60 ಮಕ್ಕಳು

ಜೈಪುರ: ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್‌ನಲ್ಲಿ ನಡೆದಿದೆ.

ಇಂದು (ಜು.25) ಬೆಳಗ್ಗೆ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಅಲ್ಲದೇ 60ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳೀಯರು ಸಹ ಅಧಿಕಾರಿಗಳೊಂದಿಗೆ ಕೈಜೋಡಿಸಿದ್ದಾರೆ.

ಮೃತಪಟ್ಟ ಮಕ್ಕಳ ಶವಗಳನ್ನ ಹೊರತೆಗೆಯಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವಶೇಷಗಳ ಅಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ನಡೆಯುತ್ತಿದೆ. ಕ್ರೇನ್‌ಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಗ್ಗೆ 8:30ಕ್ಕೆ ಶಾಲೆ ಶುರುವಾದ ವೇಳೆ ದುರಂತ ಸಂಭವಿಸಿದೆ. ಈ ಮೊದಲೇ ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ಭಾರೀ ಮಳೆಯ ಕಾರಣ ಮೇಲ್ಛಾವಣಿ ಕುಸಿದಿದೆ ಎಂದು ಹೇಳಲಾಗುತ್ತಿದೆ.

ಸಿಎಂ ಸಂತಾಪ
ಇನ್ನೂ ದುರಂತದಲ್ಲಿ ಮೃತಪಟ್ಟ ಮಕ್ಕಳಿಗೆ ರಾಜಸ್ಥಾನ ಸಿಎಂ ಭಜನ್‌ಲಾಲ್‌ ಶರ್ಮಾ  ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಈ ಘಟನೆ ನಿಜಕ್ಕೂ ಹೃದಯವಿದ್ರಾವಕವಾದದ್ದು ಅಂತ ಕಂಬನಿ ಮಿಡಿದಿದ್ದಾರೆ. ಅಲ್ಲದೇ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026