Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಾಲಾ ಬಸ್ ಅಪಘಾತ; ನಾಲ್ಕು ವಿದ್ಯಾರ್ಥಿಗಳು ವಿಧಿವಶ, 22 ವಿದ್ಯಾರ್ಥಿಗಳಿಗೆ ಗಾಯ

ಬಾಗಲಕೋಟ, 29: ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ, ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ಸಂಭವಿಸಿದೆ. 22 ಮಕ್ಕಳಿಗೆ ಗಾಯಗಳಾಗಿವೆ.



ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ (13), ಬಸವರಾಜ (17) ಮೃತ ದುರ್ದೈವಿಗಳು. ಮೃತ ವಿದ್ಯಾರ್ಥಿಗಳು ಕವಟಗಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದೆ. ಮೃತರು ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಮುಗಿಸಿಕೊಂಡು ಕವಟಗಿ ಗ್ರಾಮದ‌ ಕಡೆ ಶಾಲಾ ಬಸ್​ನಲ್ಲಿ ಹೊರಡುವಾಗ ಮಧ್ಯರಾತ್ರಿ 12 ಗಂಟೆಗೆ ಈ ದುರಂತ ಸಂಭವಿಸಿದೆ.



ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಜಗದೀಶ ಗುಡಗುಂಟಿ ಭೇಟಿ ನೀಡಿ, ಮೃತ ಮಕ್ಕಳ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಹಾಗೇ ಮಾಜಿ ಶಾಸಕ ಆನಂದ ನ್ಯಾಮಗೌಡ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು. ಕುಟುಂಬಸ್ಥರಿಗೆ ಪರಿಹಾರ ಕೊಡಿಸುವುದಾಗಿ ಇಬ್ಬರೂ ನಾಯಕರು​​ ಭರವಸೆ ನೀಡಿದ್ದಾರೆ.



ಪೊಲೀಸ್ ವರಿಷ್ಠರ ಹೇಳಿಕೆ

--------------------

ಪ್ರಕರಣ ಸಂಬಂಧ  ಬಾಗಲಕೋಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ,  ಮಧ್ಯರಾತ್ರಿ 12 ಗಂಟೆಗೆ ಆಲಗೂರು ಬಳಿ ದುರ್ಘಟನೆ ನಡೆದಿದೆ. ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ, 22 ಮಕ್ಕಳಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಜಮಖಂಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ವಿಜಯಪುರಕ್ಕೆ ರವಾನೆ ಮಾಡಲಾಗಿದೆ. ಅಪಘಾತ ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದೇವೆ ಎಂದು ಹೇಳಿದರು.



ಚಾಲಕರ ವಿಚಾರಣೆ

-------------------

ಶಾಲಾ ಬಸ್ ಚಾಲಕ ಮತ್ತು ಟ್ರ್ಯಾಕ್ಟರ್ ಚಾಲಕನನ್ನು ವಿಚಾರಣೆ ಮಾಡುತ್ತೇವೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಟ್ರ್ಯಾಕ್ಟರ್ ಚಾಲಕರಿಗೆ ಟ್ರಾಫಿಕ್ಸ್ ರೂಲ್ಸ್ ಬಗ್ಗೆ ಅರಿವು ಮೂಡಿಸ್ತಿದ್ದೇವೆ. ಆದರೂ ಸಹ ಇಂತಹ ದುರ್ಘಟನೆ ಸಂಭವಿಸಿದ್ದು ದುರದೃಷ್ಟಕರ. ಶಾಲಾ ಬಸ್​ಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ತುಂಬಬೇಡಿ. ಬೈಕ್‌ ಸವಾರರು ಪ್ರಯಾಣಿಸುವ ವೇಳೆ, ಹೆಲ್ಮೇಟ್ ಧರಿಸಿ ಎಂದು ಮನವಿ ಮಾಡಿದರು.



ನಾಲ್ಕು ದಿನದ ಹಿಂದಿನ ಅಪಘಾತದಲ್ಲಿ ನಾಲ್ವರು ಅಸು ನೀಗಿದ್ದರು



ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಇದೇ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬಳಿಯ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದರು. ಕಾಮಾಕ್ಷಿ ಬಡಿಗೇರ(30), ತುಕಾರಾಮ ತಳೇವಾಡ(30) ಮಲ್ಲು ಪೂಜಾರಿ(25), ಕಲ್ಲು ಕವಟಗಿ(35) ಮೃತ ದುರ್ದೈವಿಗಳು.



ಬಾದಾಮಿ ಬನಶಂಕರಿ ಜಾತ್ರೆಗೆ ಹೋಗಿ, ವಾಪಸ್ ತಮ್ಮ ಊರಿಗೆ ಹೋಗುವಾಗ ಅನಗವಾಡಿ ಗ್ರಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ನಿಂತಿದ್ದ ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಓರ್ವ ಮಹಿಳೆ ಸೇರಿಂದತೆ ನಾಲ್ವರು ಸ್ಥಳದಲ್ಲೆ ಸಾವೀಗಿಡಾಗಿದ್ದರು. ಮೃತರು ಬಸವನಬಾಗೇವಾಡಿ ತಾಲೂಕಿನ ಹೊನಗನಳ್ಳಿ ಮೂಲದವರು ಎಂದು ತಿಳಿದು ಬಂದಿತ್ತು. ಬೀಳಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ