ಮಹಾಲಿಂಗಪುರ: ಸ್ಥಳೀಯ ಕೆಎಲ್ಇ ಸಂಸ್ಥೆಯ ಎಸ್ಸಿಪಿ ಪಪೂ ಕಾಲೇಜ್ ಬಾಲಕಿಯರು ಇತ್ತೀಚೆಗೆ ತೇರದಾಳದಲ್ಲಿ ನಡೆದ ಬಾಗಲಕೋಟ ಜಿಲ್ಲಾಮಟ್ಟದ ಪಪೂ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ವಾಲಿಬಾಲ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾಮಟ್ಟದ ಅಥ್ಲೆಟಿಕ್ಸ್ನಲ್ಲೂ ಭಾಗವಹಿಸಿ ೪*೧೦೦ ಮೀ.ರಿಲೇಯಲ್ಲಿ ಸತತ ೩ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾದರೆ ಓರ್ವ ವಿದ್ಯಾರ್ಥಿ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ೩ ವಿದ್ಯಾರ್ಥಿಗಳು ನೆಟ್ಬಾಲ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೇ ೪೦೦ ಮೀ ಓಟ ಮತ್ತು ಹ್ಯಾಮರ್ ಥ್ರೋ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಈ ಕ್ರೀಡಾ ಸಾಧಕರಿಗೆ ದೈಹಿಕ ಶಿಕ್ಷಣ ನಿರ್ದೇಶಕ ಬಿ.ಎಂ.ಸಿದ್ನಾಳ ಮಾರ್ಗದರ್ಶನ ಮಾಡಿದ್ದರು ಎಂದು ಪ್ರಾಚಾರ್ಯ ಎಲ್.ಬಿ.ತುಪ್ಪದ ತಿಳಿಸಿದ್ದಾರೆ.