LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳಿಂದ ಮತದಾರರ ಪಟ್ಟಿ ಪರಿಷ್ಕರಣೆಯ ಪರಿಶೀಲನೆ

ಬೆಂಗಳೂರು: ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆಯನ್ನು ಮಾಡಲಾಗುತ್ತದೆ. ಈ ಪೈಕಿ ಭಾರತ ಚುಣಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ಶುದ್ಧೀಕರಣವನ್ನು ಅಧಿಕಾರಿಗಳು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮನೆ-ಮನೆಗೆ ಭೇಟಿ ನಿಡಿ ಮತದಾರರ ಪಟ್ಟಿ ಪರಿಶೀಲನೆ ನಡೆಸಿದರು.

ಜಿಲ್ಲಾ ಚುನಾವಣಾಧಿಕಾರಿಗಳು-ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿನಾಂಕ: 27.10.2023 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಸದರಿ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಭಾರತ ಚುನಾವಣಾ ಆಯೋಗವು ದಿನಾಂಕ: 27.10.2023 ರಿಂದ 09.12.2023 ರವರೆಗೆ ಅವಕಾಶ ಕಲ್ಪಿಸಿತ್ತು. ಈ ವೇಳೆ ಎಲ್ಲಾ ಬಿ.ಎಲ್.ಓ ಮತ್ತು ಬಿ.ಎಲ್.ಓ ಮೇಲ್ವಿಚಾರಕರುಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿ ಶುದ್ಧೀಕರಿಸುವ ಕಾರ್ಯ ಮಾಡಿರುತ್ತಾರೆ.

ಭಾರತ ಚುನಾವಣಾ ಆಯೋಗದ ನಿದೇರ್ಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವುದನ್ನು ಜಿಲ್ಲಾ ಚುನಾವಣಾ ಅಧಿಕಾರಿ, ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳು ಕೆಲ ಮನೆಗಳಿಗಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿರುವ ಬಗ್ಗೆ ಸೂಪರ್ ಚೆಕ್ಕಿಂಗ್ ಮಾಡಲಾಗುತ್ತದೆ. ಅದರಂತೆ ಇಂದು ಕೆಲ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಮೂನೆಗಳ ಪರಿಶೀಲನೆ:

ಶಾಂತಿನಗರದ ಹಾಗೂ ಶಿವಾಜಿನಗರರದ ವಿಧಾನಸಭಾ ಕ್ಷೇತ್ರದಲ್ಲಿ ನಮೂನೆ-6, ನಮೂನೆ-7 ಹಾಗೂ ನಮೂನೆ-8 ಅನ್ನು ಪರಿಶೀಲಿಸಿ ಅಧಿಕಾರಿಗಳು ಕೈಗೊಂಡ ಕ್ರಮದ ಕುರಿತು ಅರ್ಜಿದಾರರಿಗೆ ಮಾರ್ಗದರ್ಶನ ಒದಗಿಸಲು ಸೂಚಿಸಿದರು.

ಹೆಬ್ಬಾಳ ವಿಧಾನಸಭಾ ಕ್ಷೆತ್ರದ ಸಂಜಯನಗರದ ಅಮರ ಜ್ಯೋತಿ ಲೇಔಟ್ ನಲ್ಲಿ ನಮೂನೆ - 06ರ ಮೂಲಕ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಸೇರ್ಪಡೆಯಾಗಿರುವ ಮನೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ನಾಗಶೆಟ್ಟಿಹಳ್ಳಿಯ ಟೀಚರ್ಸ್ ಕಾಲೋನಿಯಲ್ಲಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಮೊದಲ ಮತದಾರ ಮನೆಗೆ ಭೆಟಿ ನೀಡಿ ನಮೂನೆಯನ್ನು ಪರಿಶೀಲಿಸಿದರು.

ಯಲಹಂಕ ವಿಧಾನ ಸಭಾ ಕ್ಷೇತ್ರದ ಪೂರ್ವಾಂಕರ ಅಪಾರ್ಟ್ಮೆಂಟ್ ನಲ್ಲಿ ನಮೂನೆಯನ್ನು ಪರಿಶೀಲಿಸಿ, ಮತದಾರ ಸ್ಥಳಾಂತರ ಮಾಡಿಕೊಂಡಿರುವುದಾಗಿ ನಮೂನೆ-7ರ ಮೂಲಕ ಅರ್ಜಿ ಸಲ್ಲಿಸಿರುವ ಪ್ರಕಾರ ತಿರಸ್ಕರಿಸಲಾಗಿರುತ್ತದೆ‌. ಮತ್ತೊಮ್ಮೆ ನಮೂನೆ ಸಲ್ಲಿಸಿದ್ದ ಪರಿಣಾಮ ತಿರಸ್ಕರಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದರು.

ಯಲಹಂಕದ ರೈಲ್ವೆ ವೀಲ್ ಪ್ಯಾಕ್ಟರಿ ಕ್ವಾಟ್ರಸ್ ನಲ್ಲಿ ನಮೂನೆ ಪರಿಶೀಲಿಸಿ ಮತದಾರ ಬೇರೆ ಸ್ಥಳಾಂತರಗೊಂಡಿರುವ ಕಾರಣ ನಮೂನೆಯನ್ನು ತಿರಸ್ಕರಿಸಲಾಗಿದೆ.ಮನೆ-ಮನೆಗೆ ಭೇಟಿ ನೀಡಿ ನಮೂನೆಗಳನ್ನು ಸೂಪರ್ ಚೆಕ್ಕಿಂಗ್ ಮಾಡಿ ಎಲ್ಲವೂ ಸರಿಯಿದ್ದು, ನಮೂನೆಗಳಿಗೆ ಮನೆಯವರ ಹೆಸರು, ವಿಳಾಸ, ಸಹಿ ಪರಿಶೀಲನೆಯ ಜೊತೆಗೆ ಎರಡು ಕಡೆ ಹೆಸರಿದ್ದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಯ ಜೊತೆ ಮಾತನಾಡಿ ಒಂದು ಕಡೆ ಹೆಸರನ್ನು ತೆಗೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್, ಅಪರ ಜಿಲ್ಲಾ ಜಿಲ್ಲಾ ಚುನಾವಣಾಧಿಕಾರಿ(ಉತ್ತರ) ಸ್ನೇಹಲ್, ಮತದಾರ ನೋಂದಣಾಧಿಕಾರಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಿಸಿ ಫಾರಂನಲ್ಲಿ ₹14 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಕೇಂದ್ರ ಸಚಿವರುನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು: ಸಿಎಂ ಸಿದ್ದರಾಮಯ್ಯಉತ್ತರಾಖಂಡದ ಹರಿದ್ವಾರದಲ್ಲಿರುವ ಬಿಎಚ್‌ಇಎಲ್ ಕಾರ್ಖಾನೆಗೆ ಭೇಟಿ ನೀಡಿದ ಹೆಚ್.ಡಿ. ಕುಮಾರಸ್ವಾಮಿ