Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಎಸ್‌ಸಿ/ಎಸ್‌ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನ ಸಮಸ್ಯೆ: ತ್ವರಿತ ಪರಿಹಾರಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಎಸ್‌ಸಿ/ಎಸ್‌ಟಿ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನ ಸಮಸ್ಯೆ: ತ್ವರಿತ ಪರಿಹಾರಕ್ಕೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ

ಮೈಸೂರು/ತಾಂಡವಪುರ: ಮೈಸೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನ ವಿಳಂಬದ ಬಗ್ಗೆ ಗಂಭೀರವಾಗಿ ಸ್ಪಂದಿಸಿರುವ ನಗರಾಭಿವೃದ್ಧಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಸ್‌ .ಯತೀಂದ್ರ ಸಿದ್ದರಾಮಯ್ಯ, ಕೂಡಲೇ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ನಗರದ ತಮ್ಮ ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, "ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾದ ಯಾವುದೇ ಅರ್ಹ ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯ ಆರ್ಥಿಕ ಅಡಚಣೆಯಿಂದ ಹಿನ್ನಡೆಯಾಗಬಾರದು ಎಂಬುದು ಸರ್ಕಾರದ ಬದ್ಧತೆ" ಎಂದು ತಿಳಿಸಿದರು.

ತಲಾ 58 ವಿದ್ಯಾರ್ಥಿಗಳಿಗೆ ಶಿಷ್ಯವೇತನ: ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನಡುವೆ ಸಮನ್ವಯ ಸಾಧಿಸಿ, ತಲಾ 58 ವಿದ್ಯಾರ್ಥಿಗಳಿಗೆ ತಕ್ಷಣವೇ ಶಿಷ್ಯವೇತನ ಬಿಡುಗಡೆ ಮಾಡಲು ಸಚಿವರು ನಿರ್ದೇಶನ ನೀಡಿದರು. ಅಲ್ಲದೆ, ಇಂತಹ ಸಮಸ್ಯೆಗಳು ಭವಿಷ್ಯದಲ್ಲಿ ಮರುಕಳಿಸದಂತೆ ಪ್ರವೇಶಾತಿ ಪ್ರಕ್ರಿಯೆ, ಮಾರ್ಗದರ್ಶಕರ ಸಾಮರ್ಥ್ಯ ಮತ್ತು ಸಂಪನ್ಮೂಲಗಳ ನಡುವೆ ಸಮತೋಲನ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ವಿದ್ಯಾರ್ಥಿಗಳ ಭೇಟಿ, ಭರವಸೆ: ಸಭೆಯ ನಂತರ ಸಂಶೋಧನಾ ವಿದ್ಯಾರ್ಥಿಗಳ ನಿಯೋಗವನ್ನು ಭೇಟಿಯಾದ ಸಚಿವರು, ಅವರ ಅಹವಾಲುಗಳನ್ನು ಆಲಿಸಿದರು. "ಪ್ರತಿಯೊಬ್ಬ ಅರ್ಹ ವಿದ್ಯಾರ್ಥಿಯ ಶಿಕ್ಷಣದ ಹಕ್ಕನ್ನು ರಕ್ಷಿಸುವುದು ಸರ್ಕಾರದ ಆದ್ಯತೆ. ಗುಣಮಟ್ಟದ ಉನ್ನತ ಶಿಕ್ಷಣಕ್ಕಾಗಿ ಸರ್ಕಾರ ನಿರಂತರ ಬದ್ಧತೆ ಹೊಂದಿದೆ," ಎಂದು ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.

ಸಭೆಯಲ್ಲಿ ಸಂಬಂಧಪಟ್ಟ ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ವಿಶ್ವವಿದ್ಯಾನಿಲಯದ ಪ್ರತಿನಿಧಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ