LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಛತ್ತೀಸ್‌ಗಢದಲ್ಲಿ 14 ನಕ್ಸಲರನ್ನು ಎನ್‌ಕೌಂಟರ್‌ ಮಾಡಿದ ಭದ್ರತಾ ಪಡೆ

ರಾಯ್ಪುರ: ಛತ್ತೀಸ್‌ಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ 14 ನಕ್ಸಲರನ್ನು ಎನ್‌ಕೌಂಟರ್‌ ಮಾಡಿವೆ.

ಎರಡು ಪ್ರತ್ಯೇಕ ಕಡೆಗಳಲ್ಲಿ ಎನ್‌ಕೌಂಟರ್‌ ನಡೆಸಲಾಗಿದೆ. ಉಗ್ರರ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಬಸ್ತಾರ್ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಕ್ಮಾ ಜಿಲ್ಲೆಯ ದಕ್ಷಿಣ ಪ್ರದೇಶದ ಕಾಡಿನಲ್ಲಿ ಶೋಧ ನಡೆಸುತ್ತಿದ್ದಾಗ, ನಕ್ಸಲರು ಡಿಆರ್‌ಜಿ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದರು. ಪ್ರತ್ಯುತ್ತರವಾಗಿ ಭದ್ರತಾ ಪಡೆಗಳು 12 ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಸುಕ್ಮಾ ಜಿಲ್ಲೆಯ ಕಿಸ್ತಾರಾಮ್ ಪ್ರದೇಶದ ಅರಣ್ಯದಲ್ಲಿ ಡಿಆರ್‌ಜಿ ಮತ್ತು ನಕ್ಸಲರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ 12 ನಕ್ಸಲರು ಸಾವನ್ನಪ್ಪಿದ್ದಾರೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಿರಣ್ ಚವಾಣ್ ಹೇಳಿದ್ದಾರೆ.

ಅದೇ ರೀತಿ, ಪಕ್ಕದ ಬಿಜಾಪುರ ಜಿಲ್ಲೆಯಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಡಿಆರ್‌ಜಿ ಮತ್ತು ಛತ್ತೀಸ್‌ಗಢ ಪೊಲೀಸರ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಇದರಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶದಿಂದ ಭದ್ರತಾ ಪಡೆಗಳು ಒಂದು ಸೆಲ್ಫ್-ರೀಲೋಡಿಂಗ್ ರೈಫಲ್ (ಎಸ್‌ಎಲ್‌ಆರ್) ಮತ್ತು 12 ಬೋರ್ ರೈಫಲ್‌ಗಳು ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 06-03-2026 .!ಇಂದಿನ ವಚನ: - ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮಭದ್ರಾ ಹೋರಾಟಕ್ಕೆ ಸಂಘಟನೆಗಳ ಶಕ್ತಿ:  ಮಠಾಧೀಶರು, ಮಹಿಳೆಯರು, ದಲಿತರು ಭಾಗಿ .!ಹಾಕಿ ತರಬೇತಿ ಸಂಶೋಧನಾ ಅಧ್ಯಯನ ತಂಡ ಜಂಪಣ್ಣನ ಹಟ್ಟಿ ಶಾಲೆಗೆ ಭೇಟಿನಾಳೆ  ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರದೊಡ್ಡದು: ಕಮಲಾಕ್ಷಒಳ ಮೀಸಲಾತಿ ಒಳಗೊಂಡಂತೆ  56,432 ಹುದ್ದೆಗಳನ್ನು ನೇಮಕವಾಗಲಿ: ಹಿರೆಹಳ್ಳಿ ಮಲ್ಲಿಕಾರ್ಜುನಈ ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡ ನಿರ್ಮಾಣ ಜಾಗಕ್ಕೆ ವಿರೋಧ.!ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟಅಧಿಕಾರಿಗಳ ಭೇಟೆ.!ಶಿಸ್ತು ಹಾಗೂ ಛಲ ಇದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂಬುದಕ್ಕೆ ಐಎಎಸ್ ಅಧಿಕಾರಿಯಾದ ಕುಮುದ್ ಮಿಶ್ರಾ ಸಾಕ್ಷಿ.!