LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅವಲಕ್ಕಿ ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನವಿದೆ ನೋಡಿ

ಅವಲಕ್ಕಿ ಕಂಡರೆ ಕೆಲವರಿಗೆ ಅಷ್ಟಕಷ್ಟೇ. ಅದರಲ್ಲಿ ಏನು ವಿಶೇಷತೆ ಇದೆ ಎಂದು ಮುಗುಮುರಿಯುವರೇ ಜಾಸ್ತಿ. ಅದರಲ್ಲಿಯೂ ನಾವು ಪ್ರತಿನಿತ್ಯ ಸೇವನೆ ಮಾಡುವ ಅನ್ನಕ್ಕಿಂತಲೂ ಹೆಚ್ಚು ಆರೋಗ್ಯ ಪ್ರಯೋಜನ ಇದರಲ್ಲಿ ಇದೆ.

ಅವಲಕ್ಕಿಯಲ್ಲಿ ಅನ್ನಕ್ಕಿಂತ ಕಡಿಮೆ ಕ್ಯಾಲೋರಿ ಇರುವುದರಿಂದ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರು ಇದನ್ನು ಸೇವನೆ ಮಾಡಬಹುದು. ಅದರಲ್ಲಿಯೂ ನಿಮಗೆ ಚಪಾತಿ, ಓಟ್ಸ್ ತಿಂದು ಬೇಸರವಾಗಿದ್ದರೆ ನೀವು ಅವಲಕ್ಕಿ ಸೇವನೆ ಮಾಡಬಹುದು.

ಅವಲಕ್ಕಿಯಲ್ಲಿರುವ ಫೈಬರ್ ಅಂಶವು ಕರುಳಿನ ಆರೋಗ್ಯವನ್ನು ಕಾಪಾಡಲು ಮತ್ತು ಮಲಬದ್ಧತೆಯನ್ನು ತಡೆಗಟ್ಟಲು ಸಹಾಯ ಮಾಡುತ್ತದೆ. ಅವಲಕ್ಕಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಈ ಆಹಾರವನ್ನು ಜೀರ್ಣಿಸಿಕೊಳ್ಳುವುದು ಕೂಡ ಸುಲಭವಾಗಿರುತ್ತದೆ ಅವಲಕ್ಕಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ.

ಅಲ್ಲದೆ ಮಧುಮೇಹ ಸಮಸ್ಯೆ ಇರುವವರು ಕೂಡ ಅವಲಕ್ಕಿಯ ಸೇವನೆ ಮಾಡಬಹುದು. ಪದೇ ಪದೇ ಕೆಮ್ಮು ಬರುತ್ತಿದ್ದರೆ ಅವಲಕ್ಕಿ ಮತ್ತು ಸಕ್ಕರೆ ಸೇರಿಸಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದರಿಂದ ಕೆಮ್ಮು ಕಡಿಮೆಯಾಗುತ್ತದೆ. ಹೊಟ್ಟೆಯಲ್ಲಿ ಉರಿ ಜಾಸ್ತಿಯಾಗಿದ್ದಾರೆ ಅವಲಕ್ಕಿಯನ್ನು ಮೊಸರಿನ ಜೊತೆಗೆ ಸೇವನೆ ಮಾಡಿ.

ಅವಲಕ್ಕಿಯಲ್ಲಿ ಕಬ್ಬಿಣ ಮತ್ತು ಕಾರ್ಬೋಹೈಡ್ರೇಟ್‌ಗಳು ಸಮೃದ್ಧವಾಗಿದ್ದು, ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಹಾಗಾಗಿ ಅಕ್ಕಿಗಿಂತ ಅವಲಕ್ಕಿ ಹೆಚ್ಚು ಆರೋಗ್ಯಕರ. ಗರ್ಭಾವಸ್ಥೆಯಲ್ಲಿ ರಕ್ತಹೀನತೆ, ಅನಿಮಿಯಾ ಸಮಸ್ಯೆಯಿಂದ ಬಳಲುತ್ತಿದ್ದರೆ ಅದನ್ನು ನಿವಾರಣೆ ಮಾಡಲು ವಾರದಲ್ಲಿ ನಾಲ್ಕು ಅಥವಾ ಐದು ಬಾರಿ ಅವಲಕ್ಕಿಯನ್ನು ಸೇವನೆ ಮಾಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026