ರನ್ನ ಬೆಳಗಲಿ, ಅ. ೨೪: ಬಾಗಲಕೋಟೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ನೆಟ್ಬಾಲ್ ಕ್ರೀಡಾಕೂಟದಲ್ಲಿ ರನ್ನ ಬೆಳಗಲಿಯ ಬಿವಿವಿಎಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಶಾಲೆಯ ಕ್ರೀಡಾಪಟುಗಳು ಪ್ರಪ್ರಥಮ ಬಾರಿಗೆ ಪ್ರೌಢಶಾಲಾ ವಿಭಾಗದ ನೆಟ್ಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿರುವುದು ಸಂಸ್ಥೆ ಹಾಗೂ ಪಟ್ಟಣದ ಜನತೆಗೆ ಹೆಮ್ಮೆಯ ಸಂಗತಿಯಾಗಿದೆ.ಈ ಸಾಧನೆಗೆ ಹ? ವ್ಯಕ್ತಪಡಿಸಿದ ಶಾಲೆಯ ಮುಖ್ಯಶಿಕ್ಷಕ ಕೆ. ಎ. ಧಡೂತಿ ಮಾತನಾಡಿ, ಕ್ರೀಡೆಯು ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದ ಅವಿಭಾಜ್ಯ ಅಂಗವಾಗಬೇಕು. ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಸದೃಢತೆ ಹಾಗೂ ಮಾನಸಿಕ ಸಾಮರ್ಥ್ಯ ವೃದ್ಧಿಯಾಗುತ್ತದೆ. ಶೈಕ್ಷಣಿಕ ಪ್ರಗತಿಯ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ನಮ್ಮ ಶಾಲೆ ಮುಂಚೂಣಿಯಲ್ಲಿದೆ. ವಿದ್ಯಾರ್ಥಿಗಳ ಈ ಸಾಧನೆ ಇತರರಿಗೂ ಪ್ರೇರಣೆಯಾಗಲಿದೆ ಎಂದು ಹೇಳಿದರು.ಶಾಲೆಗೆ ಕೀರ್ತಿ ತಂದ ಕ್ರೀಡಾಪಟುಗಳಾದ ಪವಿತ್ರಾ ಮಂಟೂರ, ಲಕ್ಷ್ಮಿ ಬೀಳಗಿ, ಆದಿತ್ಯಾ ಚೂರಮರಿ, ದರ್ಶನ ಅಂಬಿಗೇರ, ನೀಲಕಂಠ ಕುಲಗೋಡ, ಪ್ರದೀಪ ಗುದಿಗೊಪ್ಪ, ಪ್ರಸಾದ ಲಾಲಿಬುಡ್ಡಿ, ಸದಾಶಿವ ದಡ್ಡಿನವರ ಹಾಗೂ ಪ್ರಕಾಶ ಹಿಪ್ಪರಗಿ ಅವರ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ ಶ್ಲಾಘಿಸಿದೆ.ವಿದ್ಯಾರ್ಥಿಗಳ ಸಾಧನೆಗೆ ಬಿವಿವಿಎಸ್ ಸಂಸ್ಥೆಯ ಅಧ್ಯಕ್ಷ ಪಂಡಿತ ಪೂಜಾರಿ, ಸಂಘದ ಪದಾಧಿಕಾರಿಗಳು, ಶಿಕ್ಷಕ ವೃಂದ ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಮತ್ತ? ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ. ದೈಹಿಕ ಶಿಕ್ಷಕ ರಾಘವೇಂದ್ರ ನಾಯಕ ಅವರ ಮಾರ್ಗದರ್ಶನಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.