Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ ಇನ್ನಿಲ್ಲ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಹಿರಿಯ ಶಾಸಕ, ಮಾಜಿ ಸಚಿವ ಹೆಚ್.ವೈ. ಮೇಟಿ(79) ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೇಟಿ ಕಳೆದ ಒಂದು ವಾರದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ಆರೋಗ್ಯ ಸ್ಥಿತಿ ಬಿಗಡಾಯಿಸಿದ ಕಾರಣ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಹೆಚ್.ವೈ. ಮೇಟಿ ಮೃತಪಟ್ಟಿದ್ದಾರೆ.
ಸಿಎಂ ಸಿದ್ದರಾಮಯ್ಯ ಇತ್ತೀಚೆಗಷ್ಟೇ ಮೇಟಿ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಇದೀಗ ಮೇಟಿ ಕೊನೆಯುಸಿರೆಳೆದಿದ್ದು
, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಹೆಚ್.ವೈ. ಮೇಟಿ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಹುಲ್ಲಪ್ಪ ಯಮನಪ್ಪ ಮೇಟಿ ಬಾಗಲಕೋಟೆ ಕಾಂಗ್ರೆಸ್ ಹಾಲಿ ಶಾಸಕರಾಗಿದ್ದಾರೆ.


ಮೇಟಿ ನಡೆದು ಬಂದ ಹಾದಿ: ಮೇಟಿಯವರು ಜನತಾ ಪರಿವಾರದಿಂದ ಬೆಳೆದು ಬಂದ ರಾಜಕಾರಣಿ. ಗುಳೇದಗುಡ್ಡದಿಂದ ಜೆಡಿಎಸ್ ಪಕ್ಷದಿಂದ ಮೊದಲ ಬಾರಿಗೆ ಸ್ಪರ್ಧಿಸಿ ಹೆಚ್. ವೈ. ಮೇಟಿ ಗೆಲುವು ಸಾಧಿಸಿದ್ದರು. ಬಳಿಕ 1994 ರಲ್ಲಿ ಮತ್ತೊಮ್ಮೆ ಗುಳೇದಗುಡ್ಡದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಪಡೆದಿದ್ದರು.

1994ರಲ್ಲಿ ಹೆಚ್.ಡಿ. ದೇವೇಗೌಡ ಸಂಪುಟದಲ್ಲಿ ಅರಣ್ಯ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಮೇಟಿ ಅವರು ಜೆಡಿಎಸ್ ನಿಂದ ಬಾಗಲಕೋಟೆ ಸಂಸದರಾಗಿ ಚುನಾಯಿತರಾಗಿದ್ದರು. 1998 ರಲ್ಲಿ ಸಂಸದ ಸ್ಥಾನಕ್ಕೆ ಸೋಲು ಕಂಡಿದ್ದರು. 2004ರಲ್ಲಿ ಮತ್ತೆ ಗುಳೇದಗುಡ್ಡದಿಂದ ಗೆಲುವು ಸಾಧಿಸಿದ್ದರು.‌

ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾದ ಮೇಟಿ ಸಿದ್ದರಾಮಯ್ಯ ಜನತಾ ದಳ ತೊರೆದಾಗ ಅವರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಕಾಲಿಟ್ಟರು. ಸದ್ಯ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು. 2013ರ ಸಿದ್ದರಾಮಯ್ಯ ಸಂಪುಟದಲ್ಲಿ ಅಬಕಾರಿ ಖಾತೆ ಸಚಿವರಾಗಿದ್ದರು.


ಸಂತಾಪ-
ಮಾಜಿ ಸಚಿವರು
, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರಾದ ಹೆಚ್.ವೈ.ಮೇಟಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿನೀಡಿ, ಅವರ ಆರೋಗ್ಯ ವಿಚಾರಿಸಿದ್ದೆ. ಈ ವೇಳೆ ಗುಣಮುಖರಾಗಿ ಮತ್ತೆ ನಮ್ಮನ್ನು ಕೂಡಿಕೊಳ್ಳುತ್ತಾರೆ ಎನ್ನುವ ಭರವಸೆಯಿತ್ತು. ನನ್ನ ಭರವಸೆ, ಹಾರೈಕೆಗಳೆರೆಡೂ ಹುಸಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣೀರು ಹಾಕಿ ಸಂತಾಪ ಸೂಚಿಸಿದ್ದಾರೆ.

ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಮೇಟಿಯವರ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಸಿಗಲೆಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಸಂತಾಪ ಸೂಚಿಸಿ ಪ್ರಾರ್ಥಿಸಿದ್ದಾರೆ.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ