LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ಇನ್ನಿಲ್ಲ

ಬೆಂಗಳೂರು :  ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ.

ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದರು.
ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದರು. ಕೆಎಸ್‌‍ಆರ್‌ಟಿಸಿ ಬಸ್‌‍ ನಿಂದ ಇಳಿದು, ಬಾಗಲೂರಿನಲ್ಲಿರುವ ತಮ ಮನೆ ತಲುಪಲು ಬಿಎಂಟಿಸಿ ಬಸ್‌‍ ಹತ್ತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿದೆ. ಸಹಪ್ರಯಾಣಿಕರು ಉಪಚರಿಸಿದ ಹೊರತಾಗಿಯೂ ಬಸ್‌‍ ನಲ್ಲಿಯೇ ನಿಧನ ಹೊಂದಿದ್ದಾರೆ.
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಪ್ರೆಸ್‌‍ ಕ್ಲಬ್‌ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ರಮೇಶ್‌ಪಾಳ್ಯ, ಸಂಘದ ಪದಾಧಿಕಾರಿಗಳು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್‌‍ಕ್ಲಬ್‌ ಅಧ್ಯಕ್ಷ ಶ್ರೀಧರ್‌, ಪ್ರಧಾನ ಕಾರ್ಯದರ್ಶಿ ಶಿವಕುಮಾರ್‌ ಬೆಳ್ಳಿತಟ್ಟೆ, ವರದಿಗಾರರ ಕೂಟದ ಅಧ್ಯಕ್ಷ ಆರ್‌.ಟಿ.ವಿಠಲ ಮೂರ್ತಿ ಮತ್ತಿತರ ಹಿರಿಯ ಪತ್ರಕರ್ತರು ಶೋಕ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ