Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಸೇವೆ ಮುಗಿಯಬಹುದು... ಸೇವೆಯ ನೆನಪು ಎಂದಿಗೂ ಮುಗಿಯುವುದಿಲ್ಲ: ಲಿಡ್‌ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್

ಬೆಂಗಳೂರು, ಆಗಸ್ಟ್ 1: ಸರ್ಕಾರಿ ಸೇವೆಯಿಂದ ನಿವೃತ್ತರಾದ ಲಿಡ್‌ಕರ್‌ನ ಬೆಳಗಾವಿ ಜಿಲ್ಲಾ ಸಂಯೋಜಕರಾದ . ರುದ್ರೇಶಿ ಹಾಗೂ ಹಾವೇರಿ ಜಿಲ್ಲಾ ಸಂಯೋಜಕರಾದ ಶ್ರೀ ಕೃಷ್ಣಪ್ಪ ಅವರಿಗೆ ಬೆಂಗಳೂರಿನ ವಸಂತನಗರದಲ್ಲಿರುವ ಲಿಡ್‌ಕರ್ ಮುಖ್ಯ ಕಚೇರಿಯಲ್ಲಿ ಆತ್ಮೀಯ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ನಡೆಯಿತು.
ಲಿಡ್‌ಕರ್ ಅಧ್ಯಕ್ಷ ಶ್ರೀ ಮುಂಡರಗಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಇಬ್ಬರು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, ಶ್ರೀ ರುದ್ರೇಶಿ ಅವರು 41 ವರ್ಷ 6 ತಿಂಗಳಿಗೂ ಹೆಚ್ಚು ಅವಧಿಯ ಸೇವೆ ಸಲ್ಲಿಸಿರುವುದು ಲಿಡ್‌ಕರ್ ಇತಿಹಾಸದಲ್ಲೇ ಅಪರೂಪದ ಸಾಧನೆ. ಸಂಸ್ಥೆಯ ಬೆಳವಣಿಗೆಯೊಂದಿಗೆ ತಮ್ಮ ಬದುಕನ್ನೇ ಬೆಸೆದುಕೊಂಡು ಪ್ರಾಮಾಣಿಕವಾಗಿ ದುಡಿದ ಅವರು ಇಂದಿನ ಯುವ ಅಧಿಕಾರಿಗಳಿಗೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಶ್ರೀ ಕೃಷ್ಣಪ್ಪ ಅವರೂ ತಮ್ಮ ಕರ್ತವ್ಯವನ್ನು ಅತ್ಯಂತ ನಿಷ್ಠೆಯಿಂದ ನಿರ್ವಹಿಸಿ, ಸಹೋದ್ಯೋಗಿಗಳ ಪ್ರೀತಿ ಮತ್ತು ಜನರ ವಿಶ್ವಾಸ ಗಳಿಸಿದ ಅಧಿಕಾರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
"ನಿವೃತ್ತಿ ಎನ್ನುವುದು ಹುದ್ದೆಯಿಂದ ಮಾತ್ರ; ಸೇವೆಯಿಂದ ಅಲ್ಲ. ನಾವು ಕೆಲಸ ಮಾಡುವ ಅವಧಿಯಲ್ಲಿ ಸಮಾಜಕ್ಕೆ ಏನು ಕೊಟ್ಟೆವು, ಜನರ ಬದುಕಿನಲ್ಲಿ ಎಂತಹ ಬದಲಾವಣೆ ತಂದೆವು ಎಂಬುದೇ ನಮ್ಮ ನಿಜವಾದ ಪರಿಚಯ. ಕಚೇರಿಯ ಬಾಗಿಲು ತೆರೆಯುವ ಮೊದಲು ನಮ್ಮ ಮನಸ್ಸು ತೆರೆಯಬೇಕು. ಮಾನವೀಯತೆಯೇ ಪ್ರತಿಯೊಬ್ಬ ಸರ್ಕಾರಿ ನೌಕರನ ದೊಡ್ಡ ಸಂಪತ್ತು" ಎಂದು ಅಧ್ಯಕ್ಷರು ಹೇಳಿದರು.
ಲಿಡ್‌ಕರ್ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಹೆಚ್.ನಟರಾಜ್ ಮಾತನಾಡಿ, ಇಬ್ಬರು ಅಧಿಕಾರಿಗಳು ಸಂಸ್ಥೆಯ ಬೆಳವಣಿಗೆಗೆ ನೀಡಿರುವ ಕೊಡುಗೆ ಸದಾ ಸ್ಮರಣೀಯವಾಗಿರಲಿದೆ. ಅವರ ಅನುಭವ, ಶಿಸ್ತು ಮತ್ತು ಸೇವಾ ಮನೋಭಾವ ಮುಂದಿನ ಪೀಳಿಗೆಯ ಅಧಿಕಾರಿಗಳಿಗೆ ದಾರಿದೀಪವಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಲಿಡ್‌ಕರ್‌ನ ಹಿರಿಯ ಅಧಿಕಾರಿಗಳಾದ ಮೋನಪ್ಪ ಕಟ್ಟಿಮನಿ,ಪ್ರಾಣೇಶ್ ಮತ್ತು ಸಿಬ್ಬಂದಿ, ಚರ್ಮ ಕುಶಲಕರ್ಮಿಗಳು ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದು, ನಿವೃತ್ತ ಅಧಿಕಾರಿಗಳಿಗೆ ಆತ್ಮೀಯವಾಗಿ ಶುಭ ಹಾರೈಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ