LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

“ವಿಮಾನ ಹಾರಿಸಲು ಯೋಗ್ಯನಲ್ಲ, ಬೂಟು ಹೊಲಿಯಲು ಹೋಗು” – ಇಂಡಿಗೋ ಅಧಿಕಾರಿಗಳ ವಿರುದ್ಧ FIR

ನವದೆಹಲಿ: ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಗೋದ ತರಬೇತಿ ಪೈಲಟ್ ಒಬ್ಬರು, ಮೂವರು ಹಿರಿಯ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಆರೋಪದಲ್ಲಿ, “ವಿಮಾನ ಹಾರಿಸಲು ಯೋಗ್ಯನಲ್ಲ, “ಬೂಟುಗಳನ್ನು ಹೊಲಿಯಲು ಹೋಗು” ಎಂದು ಹೇಳಿರುವ ಕುರಿತು ಉಲ್ಲೇಖಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಸೇರಿದ 35 ವರ್ಷದ ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಇಂಡಿಗೋ ಅಧಿಕಾರಿಗಳಾದ ತಪಸ್ ಡೇ, ಮನೀಶ್ ಸಾಹ್ನಿ ಮತ್ತು ಕ್ಯಾಪ್ಟನ್ ರಾಹುಲ್ ಪಾಟೀಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.ಆದರೆ ಇಂಡಿಗೋ ಸಂಸ್ಥೆ ಆರೋಪಗಳನ್ನು “ಆಧಾರರಹಿತ” ಎಂದು ಕರೆದಿದೆ.

ದೂರುದಾರರು ಮೊದಲು ಬೆಂಗಳೂರಿನ ಪೊಲೀಸರನ್ನು ಸಂಪರ್ಕಿಸಿದರು. ಅಲ್ಲಿನ ಪೊಲೀಸರು ಶೂನ್ಯ ಎಫ್‌ಐಆರ್ ದಾಖಲಿಸಿದ್ದಾರೆ – ಅಪರಾಧ ಎಲ್ಲಿ ನಡೆದರೂ ಯಾವುದೇ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಬಹುದು. ಈ ಎಫ್‌ಐಆರ್ ಅನ್ನು ಈಗ ಇಂಡಿಗೋ ಪ್ರಧಾನ ಕಚೇರಿ ಇರುವ ಗುರುಗ್ರಾಮಕ್ಕೆ ವರ್ಗಾಯಿಸಲಾಗಿದೆ. ತನಿಖೆ ಮುಂದುವರಿದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026