LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

CISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ- ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!

ಮಂಗಳೂರು: ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ ನಡೆದಿದೆ.

ಮೃತರನ್ನು ಉತ್ತರ ಪ್ರದೇಶದ ಗಾಜಿಪುರದ ಅಭಿಷೇಕ್ ಸಿಂಗ್ (40) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಮೊದಲು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, CISF ಸಹಾಯಕ ಕಮಾಂಡೆಂಟ್ ಮೋನಿಕಾ ಸಿಹಾಗ್ ಮದುವೆಯಾಗುವ ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಪ್ರೇಮದ ಹೆಸರಿನಲ್ಲಿ ವಂಚನೆ
ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್, ವಸ್ತುಪ್ರದರ್ಶನಕ್ಕಾಗಿ ಮಂಗಳೂರಿಗೆ ಬಂದಿದ್ದರು. ಆದರೆ, ಮಾರ್ಚ್.3ರಂದು ನಗರದ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿಡಿಯೋ ಪ್ರಕಾರ, ಮೋನಿಕಾ ಈಗಾಗಲೇ ವಿವಾಹಿತೆಯಾಗಿದ್ದು, ಆ ಮಾಹಿತಿಯನ್ನು ಮುಚ್ಚಿಟ್ಟು ದೈಹಿಕ ಮತ್ತು ಆರ್ಥಿಕ ಲಾಭ ಪಡೆದು ತಮ್ಮನ್ನು ವಂಚಿಸಿದ್ದಾಳೆ ಎಂದು ಆರೋಪಿಸಲಾಗಿದೆ.

15 ಲಕ್ಷ ರೂ. ಹಣ, ಚಿನ್ನ ವಂಚನೆ ಆರೋಪ
ಮೃತನ ಸಹೋದರ ಈ ಸಂಬಂಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದು, 15 ಲಕ್ಷ ರೂಪಾಯಿ ಮತ್ತು 8 ಲಕ್ಷ ಮೌಲ್ಯದ ಚಿನ್ನ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ CISF ಅಧಿಕಾರಿ ಮೋನಿಕಾ ಸಿಹಾಗ್‌ಗೆ ನೋಟೀಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಧನೆಯನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ : ಲಂಬಾಣಿ ಗುರುಪೀಠದ ಶ್ರೀನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ: ದಿನೇಶ ಗುಂಡೂರಾವ್.!ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆ:  ಶಾಸಕ ಟಿ. ರಘುಮೂರ್ತಿಸಮುದ್ರದ ಒಳಗೆ ಭರತನಾಟ್ಯ - 14 ವರ್ಷದ ಬಾಲಕಿಯ ನಾಟ್ಯಪ್ರೇಮಕ್ಕೆ ನೆಟ್ಟಿಗರು ಫಿದಾ!ಮಗುವಿನ ಕೈಯಲ್ಲಿ ಚೀನಾದ ರೈಫಲ್ ಸ್ಕೋಪ್ ಪತ್ತೆ!ರಷ್ಯಾದ ಸೇನೆಗೆ ಸೇರುವಂತೆ ಗುಜರಾತ್ ವಿದ್ಯಾರ್ಥಿಗೆ ಒತ್ತಾಯ3 ಕೋಟಿ ವಿಮೆಗಾಗಿ ತಂದೆಗೆ ಹಾವು ಕಚ್ಚಿಸಿ ಕೊಂದ ಪುತ್ರರು!!'ಬಲವಿಲ್ಲದ ಯೂನಸ್ ಸರ್ಕಾರದಿಂದ ಕಾನೂನು ಸುವ್ಯವಸ್ಥೆ ವಿಫಲ'– ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ- ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆಮೂಳೆ ಮುರಿದರೂ ವೀಲ್‌ಚೇರ್, ಆಕ್ಸಿಜನ್ ಸಪೋರ್ಟ್‌ನಿಂದ UPSC ಬರೆದ ದಿಟ್ಟೆ