Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bagalkot

ಶರಣಪ್ಪ ಉಪ್ಪಲದಿನ್ನಿ ಅವರ ಸೇವೆ ಅವಿಸ್ಮರಣೀಯ: ಗಂಗಪ್ಪ ಕುಂಬಾಳಿ

 

ರನ್ನ ಬೆಳಗಲಿ, ಅ. ೬: ಪಟ್ಟಣದ ಕುಂಬಾಳಿ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಶರಣಪ್ಪ ಉಪ್ಪಲದಿನ್ನಿ ಅವರ ಸೇವಾ ನಿವೃತ್ತಿ ಅಂಗವಾಗಿ ಬೀಳ್ಕೊಡುಗೆ ಸಮಾರಂಭ ಮಂಗಳವಾರ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗಪ್ಪ ಕುಂಬಾಳಿ ಮಾತನಾಡಿ, ಮಕ್ಕಳ ಬಾಳಿಗೆ ಬೆಳಕಾಗಿ, ಸದಾಕಾಲ ಶ್ರಮಿಸಿದ ಶರಣಪ್ಪ ಉಪ್ಪಲದಿನ್ನಿ ಅವರ ಶೈಕ್ಷಣಿಕ ಸೇವೆ ಅವಿಸ್ಮರಣೀಯವಾಗಿದೆ. ಮಕ್ಕಳ ಶೈಕ್ಷಣಿಕ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಅವರು ನೀಡಿದ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

ಮಹಾಲಿಂಗಪ್ಪ ಕೊಣ್ಣೂರ ಮಾತನಾಡಿ, ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಬಳಿಕ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಉಪ್ಪಲದಿನ್ನಿ ಅವರು, ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವ ಮೂಲಕ ಶಾಲೆಯ ಅಭಿವೃದ್ಧಿ ಹಾಗೂ ಮಕ್ಕಳ ಜ್ಞಾನವರ್ಧನೆಗೆ ಶ್ರಮಿಸಿದ್ದಾರೆ. ಇಂತಹ ಶಿಕ್ಷಕರು ಪ್ರತಿ ಗ್ರಾಮದಲ್ಲೂ ಒಬ್ಬರು ಇದ್ದರೆ, ಆ ಗ್ರಾಮವು ಶೈಕ್ಷಣಿಕವಾಗಿ ಗಣನೀಯ ಪ್ರಗತಿ ಸಾಧಿಸಲು ಸಾಧ್ಯ ಎಂದು ಹೇಳಿದರು.

ಶಾಲೆಯ ಆಡಳಿತ ಮಂಡಳಿಯಿಂದ ಗೌರವ ಸ್ವೀಕರಿಸಿ ಮಾತನಾಡಿದ ಎಸ್.ಎಂ. ಉಪ್ಪಲದಿನ್ನಿ ಅವರು, ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರೂ ಸಂಪೂರ್ಣ ತೃಪ್ತಿ ದೊರೆಯಲಿಲ್ಲ. ದೇವರಂತೆ ಕಂಗೊಳಿಸುವ ಮುದ್ದು ಮಕ್ಕಳಲ್ಲಿ ಅಕ್ಷರದ ಜ್ಞಾನ ಬಿತ್ತುವ ಕಾರ್ಯ ನನಗೆ ಅಪಾರ ಆನಂದ ನೀಡಿದೆ. ಸರ್ಕಾರದ ಆದೇಶ ಹಾಗೂ ಪಾಲಕರ ಆಶಯದಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ವಯೋನಿವೃತ್ತಿ ಸಹಜ ಪ್ರಕ್ರಿಯೆಯಾಗಿದ್ದು, ನಾನು ವಯೋನಿವೃತ್ತಿಯಾಗಿದ್ದೇನೆ ಹೊರತು ಶಿಕ್ಷಕ ವೃತ್ತಿಯಿಂದ ನಿವೃತ್ತನಾಗಿಲ್ಲ. ಮಕ್ಕಳ ಹಾಗೂ ಶಿಕ್ಷಕರ ಆಸೆಯಂತೆ ಬಿಡುವಿನ ವೇಳೆಯಲ್ಲಿ ಶಾಲೆಗೆ ಆಗಮಿಸಿ ಮಕ್ಕಳಿಗೆ ಪಾಠ ಮಾಡುವ ಮೂಲಕ ನನ್ನ ಸೇವೆಯನ್ನು ಮುಂದುವರಿಸುತ್ತೇನೆ ಎಂದು ಭಾವುಕರಾಗಿ ಹೇಳಿದರು.

ನಾಗೇಶ ಬಟಾಟೆಪ್ಪಗೋಳ ಶಿಕ್ಷಕರು ಕಾರ್ಯಕ್ರಮವನ್ನು ನಿರೂಪಿಸಿ, ನಿರ್ವಹಿಸಿದರು.

ಕಾರ್ಯಕ್ರಮದಲ್ಲಿ ಪ.ಪಂ. ಸದಸ್ಯ ಕರೆಪ್ಪ ಕುಂಬಾಳಿ, ಹನಮಂತ ಯಡಹಳ್ಳಿ, ದಾನಮ್ಮ ಯಡಹಳ್ಳಿ, ಎಸ್.ಬಿ. ಮಾಳಿ, ಎಸ್.ಎಸ್. ಕುವಳ್ಳಿ, ಶ್ರೀನಿವಾಸ ಭಜಂತ್ರಿ, ಶೈಲಜಾ ಕರಡೆ, ವಿಜಯಶ್ರೀ ಹೊಸಮನಿ, ಲಕ್ಕಪ್ಪ ಕ್ವಾನ್ಯಾಗೋಳ, ಆರ್.ಕೆ. ಪಾಟೀಲ, ಬಸವರಾಜ ಬೂದಿಹಾಳ ಸೇರಿದಂತೆ ಎಸ್‌ಡಿಎಂಸಿ ಪದಾಧಿಕಾರಿಗಳು, ವಿವಿಧ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ