Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸರಕಾರಿ ಶಾಲಾಭಿವೃದ್ಧಿಗೆ ಸಹಕಾರ: ಶರತ್‌ ಬಚ್ಚೇಗೌಡ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಜೂ.1: ತಾಲೂಕಿನ ಎಲ್ಲಾ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ಅಗತ್ಯ ರೀತಿಯ ಸಹಕಾರ ನೀಡುವುದಾಗಿ ಶಾಸಕ ಶರತ್‌ ಬಚ್ಚೇಗೌಡ ತಿಳಿಸಿದ್ದಾರೆ.

2023-24ನೇ ಸಾಲಿ ಶೈಕ್ಷಣಿಕ ವರ್ಷ ಆರಂಭದ ಮೊದಲ ದಿನದಂದು ಶಾಲೆಗೆ ಮಕ್ಕಳನ್ನು ಬರಮಾಡಿಕೊಂಡು ಮಾತನಾಡಿದ ಅವರು, ಬಡ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನುಉಜ್ವಲಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ವರ್ಷದಿಂದ ವರ್ಷಕ್ಕೆ ಸರಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿದೆ. ತಾಲೂಕಿನಲ್ಲಿ ಸರಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿವೆ. ಈ ಸವಲತ್ತುಗಳನ್ನು ಬಳಸಿಕೊಂಡು ಶೈಕ್ಷಣಿಕವಾಗಿ ಪ್ರಗತಿ ಹೊಂದಬೇಕು.

ಕಟ್ಟಡ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳ ಕೊರತೆ ಎದುರಿಸುತ್ತಿರುವ ಶಾಲೆಗಳಿಗೆ ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ. ಪ್ರತಿಯೊಬ್ಬರು ಶಿಕ್ಷಣಕ್ಕೆ ಪ್ರೋತ್ಸಾಹಿಸಬೇಕು. ಶಾಲಾಭಿವೃದ್ಧಿ ಸಮಿತಿಗಳು ಮತ್ತು ಶಿಕ್ಷಕರು ಸಮನ್ವಯತೆಯಿಂದ ಇರಬೇಕು ಎಂದರು.

ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ನೀಡಿ ಶುಭಕೋರಿದರು. ಬಿ.ಇ.ಒ ವಿವೇಕಾನಂದ, ಮಾತಂಗ ಫೌಂಡೇಷನ್ ರಾಜ್ಯ ಉಪಾಧ್ಯಕ್ಷ ಡಾ.ಎಚ್‌.ಎಂ. ಸುಬ್ಬರಾಜ್, ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸಪ್ಪ, ರಾಜ್‌ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ