E-PAPER
07 Nov 2026, 03:22:35 PM|
Gold₹14169/gGold24K ₹14,169/g - 22K ₹12,977/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶೀಘ್ರದಲ್ಲೇ ನೂತನ ಜವಳಿ ನೀತಿ ಅನಾವರಣ : ಸಚಿವ ರುದ್ರಪ್ಪ ಲಮಾಣಿ

ಬೆಂಗಳೂರು : ರಾಜ್ಯದ ಜವಳಿ ಕ್ಷೇತ್ರದಲ್ಲಿ ಹೂಡಿಕೆ, ಉದ್ಯೋಗ ಸೃಷ್ಟಿ ಮತ್ತು ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿರುವ ಕರ್ನಾಟಕ ಜವಳಿ ಮತ್ತು ಉಡುಪು ನೀತಿ 4.0 (2026-31) ಸಿದ್ಧವಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿಯಿಂದ ಅಧಿಕೃತವಾಗಿ ಅನಾವರಣಗೊಳ್ಳಲಿದೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ರುದ್ರಪ್ಪ ಲಮಾಣಿ ತಿಳಿಸಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಯೋಜನೆಗಳು ಹಾಗೂ ವಿವಿಧ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೂತನ ಜವಳಿ ನೀತಿಯಲ್ಲಿ ರಾಜ್ಯದ ವಿವಿಧ ಭಾಗಗಳಿಗೆ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ವಿಸ್ತರಿಸುವ ಹಲವು ಹೊಸ ಕ್ರಮಗಳನ್ನು ಅಳವಡಿಸಲಾಗಿದೆ ಎಂದರು.

ಮುಖ್ಯಮಂತ್ರಿ ವಿಶೇಷ ಮುತುವರ್ಜಿ ವಹಿಸಿ ನೂತನ ಜವಳಿ ನೀತಿಯಲ್ಲಿ ಹಲವು ಹೊಸ ಅಂಶಗಳನ್ನು ಸೇರಿಸಿದ್ದಾರೆ. ಬೆಂಗಳೂರು ಸೇರಿದಂತೆ ಈಗಾಗಲೇ ಅಭಿವೃದ್ಧಿ ಹೊಂದಿರುವ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ, ರಾಜ್ಯದ ಇತರ ಭಾಗಗಳಿಗೂ ಜವಳಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯನ್ನು ವಿಸ್ತರಿಸುವುದು ಈ ನೀತಿಯ ಪ್ರಮುಖ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ರೇಷ್ಮೆ ಕ್ಷೇತ್ರವು ಕರ್ನಾಟಕದ ಗುರುತಿನ ಭಾಗವಾಗಿದೆ. ರೇಷ್ಮೆ ನೂಲು ಉತ್ಪಾದನೆಯಿಂದ ಹಿಡಿದು ಮೌಲ್ಯವರ್ಧಿತ ಉತ್ಪನ್ನಗಳವರೆಗೆ ಸಂಪೂರ್ಣ ಮೌಲ್ಯ ಸರಪಳಿಗೆ ಹೊಸ ಹೂಡಿಕೆ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ನಮ್ಮ ಉದ್ದೇಶ ಎಂದು ರುದ್ರಪ್ಪ ಲಮಾಣಿ ತಿಳಿಸಿದರು.

ಸಭೆಯಲ್ಲಿ ಪಿಎಂ-ಪಾರ್ಕ್, ಕಲಬುರಗಿ, ವಿವಿಧ ಜವಳಿ ಪಾರ್ಕ್‍ಗಳು, ಕೈಮಗ್ಗ ಮತ್ತು ಜವಳಿ ಇಲಾಖೆಯ 2026-27ನೆ ಸಾಲಿನ ಯೋಜನೆಗಳು, ಸಹಕಾರ ಸಂಘಗಳಿಗೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಸೇರಿದಂತೆ ಇಲಾಖೆಯ ವಿವಿಧ ಸಂಸ್ಥೆಗಳ ಕಾರ್ಯಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.

ಅಧಿಕಾರಿಗಳು ಯೋಜನೆಗಳ ಅನುಷ್ಠಾನದಲ್ಲಿ ನಿಗದಿತ ಗುರಿ ಸಾಧಿಸುವುದರ ಜೊತೆಗೆ, ಕೈಮಗ್ಗ ನೇಕಾರರು, ಜವಳಿ ಉದ್ಯಮಿಗಳು, ಎಂಎಸ್‍ಎಂಇಗಳು ಹಾಗೂ ಫಲಾನುಭವಿಗಳಿಗೆ ಯೋಜನೆಗಳ ಪ್ರಯೋಜನ ತ್ವರಿತವಾಗಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ರುದ್ರಪ್ಪ ಲಮಾಣಿ ಸೂಚಿಸಿದರು.

ಸಭೆಯಲ್ಲಿ ಜವಳಿ ಅಭಿವೃದ್ಧಿ ಆಯುಕ್ತ ಎ.ಬಿ. ಬಸವರಾಜು, ಐಎಎಸ್, ಹೆಚ್ಚುವರಿ ನಿರ್ದೇಶಕರಾದ ಸಿ.ಎಸ್.ಯೋಗೇಶ್ ಮತ್ತು ಶ್ರೀಧರ್ ನಾಯಕ್, ಕಾವೇರಿ ಹ್ಯಾಂಡ್‍ಲೂಮ್ಸ್ ವ್ಯವಸ್ಥಾಪಕ ನಿರ್ದೇಶಕಿ ಸೌಮ್ಯ ಎಂ. ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST