ಕುರಿ ಮತ್ತು ಮೇಕೆ, ಕೋಳಿ ಸಾಕಾಣಿಕೆ ತರಬೇತಿ.!
ದಾವಣಗೆರೆ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಸೆಪ್ಟೆಂಬರ್ 5 ಮತ್ತು 6 ರಂದು ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಹಾಗೂ 7 ಮತ್ತು 8 ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೆÇೀರ್ಟ್ ಸೈಜ್ ಪೆÇೀಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು. ತರಬೇತಿಯಲ್ಲಿ ಯಾವುದೇ ಪೆÇ್ರೀತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ದೂ. 08192-233787 ಗೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.