LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ- 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದೆ.

ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಹೋಗಿದೆ. ಫ್ರಿಡ್ಜ್‌ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ಪೂರ್ತಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. 14 ಪುರುಷರು, 5 ಮಹಿಳೆಯರು ಹಾಗೂ 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ.

ಡ್ಯೂಟಿ ಡಾಕ್ಟರ್ ದಿವ್ಯಾ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತೃತ್ವದ ತಂಡ ರಾತ್ರಿಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಮುಂಜಾನೆ 3:30ರ ಸುಮಾರಿಗೆ ಡಾ. ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ದಿವ್ಯಾ ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026