LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಲೆನಾಡು ವ್ಯಾಪ್ತಿಯಲ್ಲಿ ಆರೋಗ್ಯ ಕೇಂದ್ರವಾಗಲಿರುವ ಶಿವಮೊಗ್ಗ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ (ಸಿಮ್ಸ್) ಮತ್ತು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಮತ್ತು ಸೇವಾ ವಿತರಣೆ ಹೆಚ್ಚಿಸುವ ಕುರಿತು ಸಚಿವರು ಪರಿಶೀಲನೆ ನಡೆಸಿದರು.

ಶಿವಮೊಗ್ಗ ನಗರವನ್ನು ಪೂರ್ಣ ಪ್ರಮಾಣದ ಪ್ರಾದೇಶಿಕ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ಇದೇ ಸಂದರ್ಭದಲ್ಲಿ ಸಚಿವರು ನಿರ್ಧರಿಸಿದರು.

*ಬರಲಿದೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ*
ಈ ಕೇಂದ್ರವು ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರ ಸಂಪೂರ್ಣ ಆರೋಗ್ಯ ಅಗತ್ಯಗಳನ್ನು ಪೂರೈಸಲು ವಿನ್ಯಾಸಗೊಳಿಸಲಾದ ವೈದ್ಯಕೀಯ ಕಾಲೇಜುಗಳು, ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಸಂಸ್ಥೆಗಳ ಸಮೂಹವನ್ನು ಒಳಗೊಂಡಿರುತ್ತದೆ. ಶಿವಮೊಗ್ಗವು ಈಗಾಗಲೇ ಅತ್ಯುತ್ತಮ ರಸ್ತೆ, ರೈಲು ಮತ್ತು ವಾಯು ಸಂಪರ್ಕವನ್ನು ಹೊಂದಿರುವುದರಿಂದ, ನಗರವು ಮಲೆನಾಡು ಪ್ರದೇಶಕ್ಕೆ ಆರೋಗ್ಯ ಕೇಂದ್ರವಾಗಲಿದೆ ಎಂದು ಸಚಿವರು ವಿವರಿಸಿದರು.

"ಕಲಬುರಗಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶದ ಆರೋಗ್ಯ ಕೇಂದ್ರವಾಗಿ ಅಭಿವೃದ್ಧಿಪಡಿಸಿದಂತೆಯೇ, ಶಿವಮೊಗ್ಗವು ಈಗ ಮಲೆನಾಡಿನ ಪ್ರದೇಶದ ವೈದ್ಯಕೀಯ ಸೇವಾ ಹಬ್‌ ಆಗಿ ಕಾರ್ಯನಿರ್ವಹಿಸಲಿದೆ" ಎಂದು ಡಾ. ಪಾಟೀಲ್ ಹೇಳಿದರು.

"ಸಿಮ್ಸ್ ಮತ್ತು ಮೆಗ್ಗಾನ್‌ ಆಸ್ಪತ್ರೆಗಳು ಪ್ರಸ್ತುತ ಕಿಕ್ಕಿರಿದು ತುಂಬಿವೆ ಮತ್ತು ವೈದ್ಯರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಹೊರೆಯನ್ನು ಕಡಿಮೆ ಮಾಡಲು ಮತ್ತು ಈ ಪ್ರದೇಶದಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಸುಧಾರಿಸಲು ಹೊಸ ಸ್ಪೆಷಾಲಿಟಿ ಮತ್ತು ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲು ಹೆಚ್ಚಿನ ಹಣವನ್ನು ಹೂಡುತ್ತೇವೆ" ಎಂದು ಸಚಿವರು ಸ್ಪಷ್ಟಪಡಿಸಿದರು.

ಶಿವಮೊಗ್ಗ ಜಿಲ್ಲೆ ಕೇವಲ ಏಳು ತಾಲ್ಲೂಕುಗಳನ್ನು ಹೊಂದಿದ್ದರೂ, ಸಿಮ್ಸ್ ಮತ್ತು ಮೆಗ್ಗಾನ್‌ ಆಸ್ಪತ್ರೆಗಳಿಗೆ ನೆರೆಯ 26 ತಾಲೂಕುಗಳಿಂದಲೂ ರೋಗಿಗಳು ಬರುತ್ತಾರೆ. ಇದರಿಂದ ಹೊರೆ ಹೆಚ್ಚಿರುತ್ತದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಪ್ರಮುಖ ವೈದ್ಯಕೀಯ ಮೂಲಸೌಕರ್ಯ ಉತ್ತೇಜನ; ಡಾ. ಶರಣಪ್ರಕಾಶ್‌ ಪಾಟೀಲ್‌

"ಈ ಒತ್ತಡವನ್ನು ಕಡಿಮೆ ಮಾಡಲು ಮತ್ತು ಗುಣಮಟ್ಟದ ಆರೈಕೆಯನ್ನು ಖಚಿತಪಡಿಸಿಕೊಳ್ಳಲು, ಸುಧಾರಿತ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದು ಅವಶ್ಯಕವಾಗಿದೆ" ಎಂದು ಹೇಳಿದರು.ತಕ್ಷಣದ ನವೀಕರಣಗಳ ಭಾಗವಾಗಿ, ಮೆಗ್ಗಾನ್‌ ಆಸ್ಪತ್ರೆಗೆ ಹೆಚ್ಚುವರಿ ಎಂಆರ್‌ ಐ ಯಂತ್ರ ಮತ್ತು ಶವ ಸಾಗಿಸುವ ವಾಹನವನ್ನು ಖರೀದಿಸಲು ಸರ್ಕಾರ ಅನುಮೋದನೆ ನೀಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ