Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಶಿವಮೊಗ್ಗ ದಸರಾ ಆನೆ ಘಟನೆ: ಸಿಸಿಎಫ್ ನೇತೃತ್ವದಲ್ಲಿ ತನಿಖೆಗೆ ಡಿಸಿ ಆದೇಶ!

ಶಿವಮೊಗ್ಗ: ನಗರದಲ್ಲಿ ನಡೆದ ದಸರಾ ಜಂಬೂಸವಾರಿ ಮೆರವಣಿಗೆ ವೇಳೆ ಆನೆ ಬೆದರಿ ಅಂಬಾರಿ ಕೆಳಗೆ ಬಿದ್ದಿರುವ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಧಾರ್ಮಿಕ ಪರಿಹಾರ ಹಾಗೂ ಪ್ರಾಯಶ್ಚಿತ್ತ ಪೂಜೆಗಳನ್ನು ನೆರವೇರಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ಶಿವಮೊಗ್ಗ ನಗರ ಶಾಸಕ ಎಸ್‌.ಎನ್. ಚನ್ನಬಸಪ್ಪ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಎರಡು ಆನೆಗಳು ದಿಢೀರನೆ ಹಿಮ್ಮುಖವಾಗಿ ಓಡಿಬಂದ ಪ್ರಕರಣದ ಬಗ್ಗೆ ಸಿಸಿಎಫ್ ನೇತೃತ್ವದಲ್ಲಿ ಆಂತರಿಕ ತನಿಖೆ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಗುರುವಾರ ಕರ್ತವ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಚನ್ನಬಸಪ್ಪ, ಘಟನೆಯ ಸಮಗ್ರ ವಿವರಗಳನ್ನು ಹಂಚಿಕೊಂಡರು.

ತಾಯಿ ಚಾಮುಂಡೇಶ್ವರಿ ವಿಗ್ರಹ, ಬೆಳ್ಳಿ ಮಂಟಪ ನವೀಕರಣ

ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆಯು ಮೆರವಣಿಗೆಯ ಮಧ್ಯದಲ್ಲೇ ಏಕಾಏಕಿ ತಿರುಗಿ ಓಡಿದ್ದರಿಂದ ಅಂಬಾರಿ ಕೆಳಗೆ ಬಿದ್ದಿದೆ. ಪರಿಣಾಮವಾಗಿ ತಾಯಿ ಚಾಮುಂಡೇಶ್ವರಿ ವಿಗ್ರಹದ ಬಲಗೈ ಮುರಿದಿದ್ದು, 430 ಕೆಜಿ ತೂಕದ ಬೆಳ್ಳಿ ಮಂಟಪಕ್ಕೆ ಭಾರಿ ಹಾನಿಯಾಗಿದೆ.

"ಬೆಳ್ಳಿ ಮಂಟಪವು ಮಹಾನಗರ ಪಾಲಿಕೆ ಹಾಗೂ ಸಾರ್ವಜನಿಕರ ಆಸ್ತಿಯಾಗಿದೆ. ಇದನ್ನು ಸಂಪೂರ್ಣವಾಗಿ ದುರಸ್ತಿಪಡಿಸಿ ಬದಲಾಯಿಸಲಾಗುವುದು. ಜೊತೆಗೆ ತಾಯಿ ಚಾಮುಂಡೇಶ್ವರಿಯ ನೂತನ ಮೂರ್ತಿಯನ್ನು ಮಾಡಿಸಲಾಗುವುದು. ಇದರ ಸಂಪೂರ್ಣ ವೆಚ್ಚವನ್ನು ಪಾಲಿಕೆಯೇ ಭರಿಸಲಿದೆ. ತಾಯಿ ತನ್ನ ಕೈಯನ್ನು ಮುರಿದುಕೊಂಡು ಭಕ್ತರಿಗೆ ಯಾವುದೇ ಪ್ರಾಣಾಪಾಯವಾಗದಂತೆ ರಕ್ಷಿಸಿದ್ದಾಳೆ. ಕಾರು ಹಾಗೂ ಮನೆಗಳಿಗೆ ಮಾತ್ರ ಸ್ವಲ್ಪ ಹಾನಿಯಾಗಿದೆ," ಎಂದು ಶಾಸಕರು ಹೇಳಿದರು.

ಎಲ್ಲರೂ ಜವಾಬ್ದಾರಿ ಹೊರಬೇಕು: ಅಧಿಕಾರಿಗಳ ಪರ ಶಾಸಕರ ಬ್ಯಾಟಿಂಗ್

ಘಟನೆಯ ಕುರಿತು ಅಧಿಕಾರಿಗಳ ನಿರ್ಲಕ್ಷ್ಯವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಶಾಸಕರು, "ಉತ್ಸವ ಯಶಸ್ವಿಯಾದಾಗ ನಾವೇ ಮುಂಚೂಣಿಯಲ್ಲಿ ನಿಲ್ಲುವವರು, ಈಗ ಅವಘಡ ಸಂಭವಿಸಿದಾಗ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ನಾವೆಲ್ಲರೂ ಜವಾಬ್ದಾರಿ ಹೊರಬೇಕಾಗುತ್ತದೆ. ಮೂಕಪ್ರಾಣಿಯಾದ ಆನೆಯ ವರ್ತನೆ ಯಾವ ಕ್ಷಣದಲ್ಲಿ ಹೇಗೆ ಬದಲಾಗುತ್ತದೆ ಎಂದು ಊಹಿಸಲು ಸಾಧ್ಯವಿಲ್ಲ. ಆನೆಗೆ ಪ್ರತಿದಿನ ತಾಲೀಮು ನಡೆಸುತ್ತಿದ್ದ ಶಿವಪ್ಪನಾಯಕ ಅರಮನೆ ಹಾಗೂ ಕೋಟೆ ರಸ್ತೆಯತ್ತಲೇ ಅದು ಓಡಿದೆ. ಮುಂದೆ ದಸರಾ ಆಚರಣೆ ಕುರಿತು ಸರ್ಕಾರ ನೀಡುವ ಮಾರ್ಗಸೂಚಿಯಂತೆ ಕ್ರಮ ವಹಿಸಲಾಗುವುದು," ಎಂದರು.

ಸಿಸಿಎಫ್ ನೇತೃತ್ವದಲ್ಲಿ ತನಿಖೆ: ಜಿಲ್ಲಾಧಿಕಾರಿ ಮಾಹಿತಿ

ಬುಧವಾರ ನಡೆದ ಮೆರವಣಿಗೆಯಿಂದ ಸೋಮಣ್ಣ ಹಾಗೂ ಬಹದ್ದೂರ್ ಆನೆಗಳು ಹಿಂದಕ್ಕೆ ಓಡಿಬಂದ ಪ್ರಕರಣವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಹನುಮಂತಪ್ಪ ಅವರ ನೇತೃತ್ವದಲ್ಲಿ ಆಂತರಿಕ ಸತ್ಯಶೋಧನಾ ಸಮಿತಿ ರಚಿಸಲಾಗಿದ್ದು, ಸಮಿತಿ ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಡಿಸಿಗೆ ಈಶ್ವರಪ್ಪ, ಅರ್ಚಕರ ನಿಯೋಗ ಭೇಟಿ: ಧಾರ್ಮಿಕ ಪರಿಹಾರಕ್ಕೆ ಆಗ್ರಹ

ಘಟನೆ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಶಾಸಕ ಚನ್ನಬಸಪ್ಪ, ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕರ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.

ಅವಘಡ ನಡೆದಿರುವ ಕಾರಣ ಶಾಸ್ತ್ರೋಕ್ತವಾಗಿ ಧಾರ್ಮಿಕ ಪರಿಹಾರ ಹಾಗೂ ಶಾಂತಿ ಹೋಮಗಳನ್ನು ಕೈಗೊಳ್ಳುವುದು ಸೂಕ್ತ ಎಂದು ನಿಯೋಗವು ಸಲಹೆ ನೀಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಡಿಸಿ, "ಇದು ಧಾರ್ಮಿಕ ನಂಬಿಕೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರವಾಗಿರುವುದರಿಂದ ಧಾರ್ಮಿಕ ಪರಿಷತ್ ಹಾಗೂ ಮುಜರಾಯಿ ಇಲಾಖೆಯ ಮಾರ್ಗದರ್ಶನ ಅಗತ್ಯವಿದೆ. ನಿಯೋಗ ನೀಡುವ ಲಿಖಿತ ಮನವಿಯನ್ನು ಆಧರಿಸಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಧಾರ್ಮಿಕ ದತ್ತಿ ಇಲಾಖೆಯ ನಿರ್ದೇಶನದಂತೆ ಮುಂದಿನ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುವುದು," ಎಂದು ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!