LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗ ರೆಡ್‌ಅಲರ್ಟ್: ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಶಿವಮೊಗ್ಗ , ಜೂ.08 : ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ ಶಿವಮೊಗ್ಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಘೋಷಿಸಿದೆ. ಈಗಾಗಲೇ ರಾಜ್ಯಕ್ಕೆ ಮುಂಗಾರು ಪ್ರವೇಶಗೊಂಡಿದ್ದು, ನಾಳೆಯಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲೆಯಲ್ಲಿ ಸಾಮಾನ್ಯದಿಂದ ಭಾರೀ ಪ್ರಮಾಣದ ಮಳೆ ಬೀಳಬಹುದಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಸಾಂದರ್ಭಿಕವಾಗಿ ತಕ್ಷಣ ಕ್ರಮ ಕೈಗೊಳ್ಳಬೇಕಾದ ತುರ್ತು ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸದಾ ಸಿದ್ಧರಿರುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
 ಹವಾಮಾನ ತಜ್ಞರ ವರದಿಯನ್ನಾಧರಿಸಿ, ಭಾರೀ ಪ್ರಮಾಣದ ಮಳೆ ಬಂದಲ್ಲಿ ಸಂಭವಿಸಬಹುದಾದ ಅವಘಡಗಳ ಕುರಿತು ಏರ್ಪಡಿಸಲಾಗಿದ್ದ ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಇಂತಹ ತುರ್ತು ಸಂದರ್ಭದಲ್ಲಿ ಕಂದಾಯ, ಅರಣ್ಯ, ಅಗ್ನಿಶಾಮಕ, ಪಂಚಾಯತ್ರಾಜ್, ಲೋಕೋಪಯೋಗಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ರಜೆಯ ಮೇಲೆ ತೆರಳದಂತೆ ಹಾಗೂ ತಮ್ಮ ಕಾರ್ಯಕ್ಷೇತ್ರದಲ್ಲಿದ್ದು, ಸಕಾಲದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಲಹೆ ನೀಡಿದ ಅವರು, ಅಧಿಕಾರಿ-ಸಿಬ್ಬಂಧಿಗಳು ಕೇಂದ್ರಸ್ಥಾನದಿಂದ ಹೊರಹೋಗದಂತೆ ಅವರು ಸೂಚನೆ ನೀಡಿದ್ದಾರೆ.
ಈ ತುರ್ತು ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿಪಾಸ್ತಿ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಟಾರ್ಚ್ಗಳು, ಬ್ಯಾಟರಿಗಳು, ಮೊಬೈಲ್ ಪವರ್ ಬ್ಯಾಂಕ್ಗಳು ಮತ್ತು ಹೆಚ್ಚುವರಿ ಬ್ಯಾಟರಿಗಳನ್ನು ಸಿದ್ಧವಾಗಿಟ್ಟುಕೊಳ್ಳುವುದರ ಜೊತೆಗೆ ತುರ್ತು ಬಳಕೆಗೆ ಅಗತ್ಯವಿರುವ ಕುಡಿಯುವ ನೀರು, ಒಣ ಆಹಾರ, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಮತ್ತು ವೈದ್ಯಕೀಯ ಚೀಟಿಗಳನ್ನು ಜೊತೆಯಲ್ಲಿಟ್ಟುಕೊಳ್ಳುವಂತೆ ಅವರು ಸಲಹೆ ನೀಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಪೊಲೀಸ್ವರಿಷ್ಟಾಧಿಕಾರಿ ಬಿ.ನಿಖಿಲ್, ಅರಣ್ಯಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST