ಬಾಗಲಕೋಟೆ: ಹುಚ್ಚು ನಾಯಿ ಕಡಿದು ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ. ಪ್ರದೀಪ್ ಚಂದ್ರಶೇಖರ್ ಹಳೆರೊಳ್ಳಿ(22) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.
ಬಾಗಲಕೋಟೆಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಪ್ರದೀಪ್ ಮೃತಪಟ್ಟಿದ್ದಾನೆ. ವಿಜಯಪುರ ಜಿಲ್ಲೆ ನಿಡೆಗುಂದಿ ತಾಲೂಕಿನ ಗೋಲಸಂಗಿ ಗ್ರಾಮದ ನಿವಾಸಿಯಾಗಿರುವ ಪ್ರದೀಪ್ ಗೆ ಮಾರ್ಚ್ ತಿಂಗಳಲ್ಲಿ ಹುಚ್ಚುನಾಯಿ ಕಚ್ಚಿತ್ತು.
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬನ್ನಿಕೇರಿ ಚಂದ್ರಾದೇವಿ ಜಾತ್ರೆಯಲ್ಲಿ ಪ್ರದೀಪ್ ಗೆ ಹುಚ್ಚು ನಾಯಿ ಕಚ್ಚಿತ್ತು. ಆದರೆ ಪ್ರದೀಪ್ ಲಸಿಕೆ ಹಾಕಿಸಿಕೊಳ್ಳದೇ ನಿರ್ಲಕ್ಷ್ಯ ತೋರಿದ್ದ ಎನ್ನಲಾಗಿದೆ. ವಾರದ ಹಿಂದೆ ನಿಡಗುಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದ ಪ್ರದೀಪ್ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.