LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
💛

ಸ್ವತಂತ್ರ ಪತ್ರಿಕೋದ್ಯಮ ಬೆಂಬಲಿಸಲು ಲೇಖನದ ಕೆಳಭಾಗದಲ್ಲಿ UPI ಮೂಲಕ ಕಾಣಿಕೆ ನೀಡಿ!

State News

SHOCKING : ಪೋಷಕರೇ ಹುಷಾರ್ : ಗಾಂಜಾ ಮಿಶ್ರಿತ ಚಾಕೊಲೇಟ್ ಮಾರಾಟಕ್ಕೆ ಯತ್ನ, ಆರೋಪಿ ಅರೆಸ್ಟ್!

ಬೆಳಗಾವಿ: ನಗರದ ಕಾಲೇಜೊಂದರ ಸಮೀಪ ಅಕ್ರಮವಾಗಿ ಗಾಂಜಾ ಮಿಶ್ರಿತ ಚಾಕೊಲೇಟ್‌ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಖತರ್ನಾಕ್ ಆರೋಪಿಯೊಬ್ಬನನ್ನು ಬಂಧಿಸುವಲ್ಲಿ ಬೆಳಗಾವಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂಲತಃ ಉತ್ತರ ಪ್ರದೇಶದವನಾಗಿದ್ದು, ಪ್ರಸ್ತುತ ನಗರದ ಹನುಮಾನ ನಗರದಲ್ಲಿ ವಾಸವಿದ್ದ ಪಾನ್ ಅಂಗಡಿ ಮಾಲೀಕ ಬೋಲು ಪ್ರಜಾಪತಿ (39) ಬಂಧಿತ ವ್ಯಕ್ತಿಯಾಗಿದ್ದಾನೆ. ಕಾಲೇಜು ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಈ ಅಕ್ರಮ ಜಾಲ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಉದ್ಯಮಬಾಗ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆರೋಪಿಯು ಸಾರ್ವಜನಿಕ ರಸ್ತೆಯಲ್ಲಿ ನಿಂತು ಈ ನಿಷೇಧಿತ ಚಾಕೊಲೇಟ್‌ಗಳನ್ನು ಮಾರಾಟ ಮಾಡುತ್ತಿದ್ದಾಗ, ಖಚಿತ ಮಾಹಿತಿ ಆಧರಿಸಿ ಪೊಲೀಸರು ತಕ್ಷಣ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ ಆರೋಪಿಯಿಂದ ಸುಮಾರು ₹54,000 ಮೌಲ್ಯದ 6.850 ಕೆಜಿ ತೂಕದ ಗಾಂಜಾ ಮಿಶ್ರಿತ ಚಾಕೊಲೇಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಇದರ ಜೊತೆಗೆ ಕೃತ್ಯಕ್ಕೆ ಬಳಸಲಾಗಿದ್ದ ₹30,000 ಮೌಲ್ಯದ ಒಂದು ಸ್ಕೂಟಿ, ₹10,000 ಮೌಲ್ಯದ ಮೊಬೈಲ್ ಫೋನ್ ಹಾಗೂ ₹600 ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಆರೋಪಿಯ ವಿರುದ್ಧ ಎನ್‌ಡಿಪಿಎಸ್ (NDPS) ಕಾಯ್ದೆ-1985 ರ ಕಲಂ 20(b)(ii)(B) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮಾದಕ ವಸ್ತುವಿನ ಸರಬರಾಜು ಜಾಲದ ಕುರಿತು ಪೊಲೀಸರು ಮುಂದಿನ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಮಾಧ್ಯಮ ಬೆಂಬಲಿಸಿ / Support Local Journalism

ನಿಮ್ಮ ಬೆಂಬಲ ಸ್ವತಂತ್ರ ಪತ್ರಿಕೋದ್ಯಮವನ್ನು ಜೀವಂತವಾಗಿರಿಸುತ್ತದೆ. Scan & Pay directly via PhonePe, GPay or Paytm.

0% Gateway Commission — Money goes 100% directly into publisher bank account.
Scan with Any UPI App
Scan QR Code to Support News via UPI
Pre-filled: ₹10.00
UPI ID: khushihost1@ybl
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಗರದಲ್ಲಿ ಸರ್ಕಾರಿ ಶಾಲೆ ಭೂಮಿ ಒತ್ತುವರಿ ತೆರವಿಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಎದುರು ದಸಂಸ, ರೈತ ಸಂಘ ಧರಣಿ!ಸಾಗರದಲ್ಲಿ ಬಿ.ಎಡ್ ಅಂಕಪಟ್ಟಿ ನೀಡದ ಸಿಗಂದೂರೇಶ್ವರಿ ಕಾಲೇಜು ಎದುರು ವಿದ್ಯಾರ್ಥಿಗಳು ಪ್ರತಿಭಟನೆ!'ಮಲೆನಾಡು ರೈತರ ಸಮಸ್ಯೆ' ಪರಿಹಾರಕ್ಕೆ ತುರ್ತು ಸಭೆ ಕರೆಯಲು 'ಸಿದ್ಧರಾಮಯ್ಯ, ಬಿ.ಕೆ.ಹರಿಪ್ರಸಾದ್‌'ಗೆ ತೀ.ನ ಶ್ರೀನಿವಾಸ್ ಮನವಿ!ಆ.15ರ ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಮಾಹಿತಿBIG NEWS: ‘VB–G RAM G ಯೋಜನೆ' ಅನುಷ್ಠಾನದಲ್ಲಿ ನಿಯಮಬಾಹಿರ ಒತ್ತಡ: ಆ.17ರಿಂದ ಅಸಹಕಾರ ಚಳವಳಿಗೆ 'PDO ಸಂಘ' ಕರೆ!BIG NEWS: ಬೆಂಗಳೂರಿನ ಖಜಾನೆ ಕಚೇರಿ ಮೇಲೆ ಲೋಕಾಯುಕ್ತ ದಾಳಿ: 70,000 ಸಂಬಳದ ಅಧಿಕಾರಿಗೆ ತಿಂಗಳಿಗೆ 6 ಲಕ್ಷ ಜಮೆ ಪತ್ತೆ!ಉಚಿತ ಮದುಮಗಳ ಶೃಂಗಾರ ತರಬೇತಿಗೆ ಅರ್ಜಿ ಆಹ್ವಾನBREAKING: ರಾಜ್ಯ ಸರ್ಕಾರದಿಂದ ಹೋಟೆಲ್, ಧಾಬಾಗಳಲ್ಲಿ 'ನೈರ್ಮಲ್ಯ ಮುನ್ನೆಚ್ಚರಿಕೆ'ಗೆ ಹೊಸ ಮಾರ್ಗಸೂಚಿ ಪ್ರಕಟಒಂದು ತಿಂಗಳಲ್ಲಿ ಅಲೆಮಾರಿ ಮತ್ತು ಆದಿವಾಸಿ ಆಯೋಗ ರಚನೆ: ಸಿಎಂ ಡಿ.ಕೆ ಶಿವಕುಮಾರ್ ಭರವಸೆಬೆಂಗಳೂರಿನ ಸರ್ವಜ್ಞನಗರದಲ್ಲಿ ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ