Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

SHOCKING : ಬೆಂಗಳೂರಲ್ಲಿ ಸಹೋದರನೊಂದಿಗೆನೆ ಪತ್ನಿಯ ಅಕ್ರಮ ಸಂಬಂಧ : ಮನನೊಂದು ಪತಿ ಆತ್ಮಹತ್ಯೆಗೆ ಶರಣು!

ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ಅತ್ಯಂತ ನೋವಿನ ಹಾಗೂ ಗಮನೆಸೆಳೆಯುವ ಘಟನೆಯೊಂದು ವರದಿಯಾಗಿದೆ. ಸಂಬಂಧದಲ್ಲಿ ಸೋದರನಾಗಿರುವ ವ್ಯಕ್ತಿಯೊಂದಿಗೆ ಪತ್ನಿ ನಡೆಸುತ್ತಿದ್ದ ಅಕ್ರಮ ಸಂಬಂಧ ಹಾಗೂ ನಿರಂತರ ಕಿರುಕುಳಕ್ಕೆ ಮನನೊಂದ ಆಟೋ ಚಾಲಕನೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮೃತರನ್ನು 35 ವರ್ಷದ ಮುನಿಕೃಷ್ಣ ಎಂದು ಗುರುತಿಸಲಾಗಿದ್ದು, ಈತ ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿದ್ದರು. ಇವರಿಗೆ 10 ವರ್ಷಗಳ ಹಿಂದೆ ನಯನಾ ಎಂಬುವವರೊಂದಿಗೆ ಮದುವೆಯಾಗಿದ್ದು, ದಂಪತಿಗೆ 6 ವರ್ಷದ ಗಂಡು ಮಗನಿದ್ದಾನೆ. ಪ್ರಸ್ತುತ ನಯನಾ ಅವರು ಎರಡನೇ ಮಗುವಿನ ಗರ್ಭಿಣಿಯಾಗಿದ್ದರು. ದಾಂಪತ್ಯ ಜೀವನ ಸುಗಮವಾಗಿ ಸಾಗುತ್ತಿದ್ದರೂ, ಮುನಿಕೃಷ್ಣನ ಸಂಬಂಧಿಯೇ ಆದ ಕ್ಯಾಬ್ ಡ್ರೈವರ್ ಕುಮಾರ ಎಂಬಾತ ಇವರ ಸಂಸಾರದಲ್ಲಿ ಹುಳಿ ಹಿಂಡಿದ್ದಾನೆ.

ಮುನಿಕೃಷ್ಣ ಆಟೋ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಆತನ ಮನೆಗೆ ಎಂಟ್ರಿ ಕೊಡುತ್ತಿದ್ದ ಕುಮಾರ, ನಯನಾಳ ಜೊತೆ ಅನೈತಿಕ ಸಂಬಂಧ ಮುಂದುವರೆಸಿದ್ದ. ಇವರ ಕೃತ್ಯದ ಅಸಭ್ಯ ಫೋಟೋಗಳು ಮತ್ತು ವಿಡಿಯೋಗಳನ್ನು ಖುದ್ದು ಕುಮಾರನೇ ಮುನಿಕೃಷ್ಣನ ವಾಟ್ಸಾಪ್‌ಗೆ ಕಳುಹಿಸಿದ್ದರಿಂದ ಈ ಅಕ್ರಮ ಸಂಬಂಧ ಬಯಲಾಗಿತ್ತು. ವಿಚಾರ ತಿಳಿದು ಪತ್ನಿ ನಯನಾ ತವರು ಮನೆ ಸೇರಿದ್ದಲ್ಲದೆ, ಕುಮಾರ ರಸ್ತೆಯಲ್ಲಿ ಸಿಕ್ಕಾಗೆಲ್ಲಾ ಮುನಿಕೃಷ್ಣನಿಗೆ ನಿಂದಿಸಿ, ನಯನಾ ಹೊಟ್ಟೆಯಲ್ಲಿರುವ ಮಗು ತನ್ನದೇ ಎಂದು ಹೇಳಿ ತೀವ್ರ ಮಾನಸಿಕ ಹಿಂಸೆ ಮತ್ತು ಟಾರ್ಚರ್ ನೀಡುತ್ತಿದ್ದ.

ಈ ಎಲ್ಲ ಬೆಳವಣಿಗೆಗಳಿಂದ ತೀವ್ರವಾಗಿ ನೊಂದಿದ್ದ ಮುನಿಕೃಷ್ಣ, ಸಾಯುವ ಮುನ್ನ ದಿನ ತನ್ನ ಸಹೋದರನ ಬಳಿ ನೋವನ್ನು ತೋಡಿಕೊಂಡು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರಂಭದಲ್ಲಿ ಕೌಟುಂಬಿಕ ಕಲಹವೆಂದು ಭಾವಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತಾದರೂ, ಬಳಿಕ ಸೋದರ ನೀಡಿದ ಮಾಹಿತಿಯಿಂದ ಅನೈತಿಕ ಸಂಬಂಧವೇ ಸಾವಿಗೆ ಕಾರಣ ಎಂಬುದು ಗೊತ್ತಾಗಿದೆ. ಈ ಕುರಿತು ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!