LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

"ಸಮಾಜಕ್ಕೆ ಮೌಲ್ಯ ಆಧಾರಿತ ಸಾಹಿತ್ಯ ನೀಡಿದ್ದು ಶ್ರೀ ಭಕ್ತ ಕನಕದಾಸರು : ಯು ಎಂ ಅಲಗೂರ

ಗುಲ್ಬರ್ಗ:  "ಸಮಾಜಕ್ಕೆ ಮೌಲ್ಯ ಆಧಾರಿತ ಸಾಹಿತ್ಯ ನೀಡಿದ್ದು ಶ್ರೀ ಭಕ್ತ ಕನಕದಾಸರು. ಇವರು ಸಮಾಜಕ್ಕೆ ಶರಣರ ದಾಸರ ಸೂಫಿ ಸಂತರು ಸೇವೆ ಅಮೋಘವಾದದ್ದು ತಮ್ಮ ಶ್ರೇಷ್ಠ ಸಂದೇಶಗಳ ಮೂಲಕ ಸಮಾಜ ಸುಧಾರಣೆ ಜಾತಿ ವ್ಯವಸ್ಥೆ ಸಮಾಜದ ಅನೇಕ ಮೂಢನಂಬಿಕೆಗಳನ್ನು ಹೋಗಲಾಡಿಸಿದರು ಎಂದು ವಕೀಲ ಯು ಎಂ ಅಲಗೂರ ತಿಳಿಸಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಶ್ರೀ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿ , ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ್ದಾರೆ. ದಾಸರ,ತತ್ವಪದಗಳ ಮೂಲಕ ಜನರಿಗೆ ತಿಳಿ ಹೇಳಿದರು. ಸಮಾಜದಲ್ಲಿರುವ ಎಲ್ಲಾ ಜಾತಿಗಳನ್ನು ಒಂದೇ ಎಂಬ ಭಾವನೆಯಲ್ಲಿ ನೋಡಿದ ಮಹಾನ್ ಜ್ಞಾನಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಎನ್ ಎಸ್ ತೆಗ್ಗಿಹಳ್ಳಿ ಪ್ರಾಚಾರ್ಯರು ಅಧ್ಯಕ್ಷೀಯ ಭಾಷಣದಲ್ಲಿ ಶರಣರ ದಾಸ ಶ್ರೇಷ್ಠ ಜಯಂತಿಗಳನ್ನು ಆಚರಣೆ ಮಾಡುವುದು ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಆದರ್ಶ ಬದುಕನ್ನು ಕಟ್ಟಿಕೊಳ್ಳಲು ಮಾದರಿಯಾಗಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಕೀನಾ ಪಾಟೀಲ್, ಬಿ ಡಿ ಭೂಸನೂರ ಹಾಗೂ ಆದರ್ಶ ವಿದ್ಯಾಲಯ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಉಪನ್ಯಾಸಕಿಯರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ