Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಬಳ್ಳಾರಿಯಲ್ಲಿ ಸರಳವಾಗಿ ಜರುಗಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ


ಬಳ್ಳಾರಿ,ಅ.27: ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2026ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೋಮವಾರ 2026ನೇ ಸಾಲಿನ ಜಿಲ್ಲಾ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ನಗರದ ವಾಲ್ಮೀಕಿ ವೃತ್ತ ಹಾಗೂ ವಾಲ್ಮೀಕಿ ಭವನದ ಮುಂಭಾಗದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿಯವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ, ಜಯಂತಿಯ ಶುಭಾಶಯ ಕೋರಿದರು.
ಬಳಿಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ಇದೇ ವೇಳೆ 2025-26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಗಳಿಸಿ ಸಾಧನೆ ತೋರಿದ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಅಭಿನಂದನಾ ಪತ್ರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್. ಬಸವರಾಜ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೊದ್ದೀನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ