LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌: 6ನೇ ಸ್ಥಾನಕ್ಕೆ ಏರಿದ ಶುಭಮನ್ ಗಿಲ್

ಮುಂಬೈ : ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದಲ್ಲಿ 400 ಕ್ಕೂ ಅಧಿಕ ರನ್ ಕಲೆ ಹಾಕಿದ್ದ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಇದೀಗ ಐಸಿಸಿ ಹೊಸ ಟೆಸ್ಟ್ ಶ್ರೇಯಾಂಕದಲ್ಲಿ ಭರ್ಜರಿ ಮುಂಬಡ್ತಿ ಪಡೆದುಕೊಂಡಿದ್ದಾರೆ.

ನೂತನ ರ್‍ಯಾಕಿಂಗ್‌ನಲ್ಲಿ 15 ಬ್ಯಾಟ್ಸ್‌ಮನ್‌ಗಳನ್ನು ಹಿಂದಿಕ್ಕಿರುವ ಶುಭಮನ್ ಗಿಲ್ ಆರನೇ ಸ್ಥಾನಕ್ಕೆ ಬಂದಿದ್ದಾರೆ. ವಾಸ್ತವವಾಗಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ನಂತರ 21 ನೇ ಸ್ಥಾನದಲ್ಲಿದ್ದ ಶುಭ್​ಮನ್ ಗಿಲ್ ಇದೀಗ ಎರಡನೇ ಟೆಸ್ಟ್ ನಂತರ ಆರನೇ ಸ್ಥಾನಕ್ಕೆ ತಲುಪಿದ್ದಾರೆ. ಉಳಿದಂತೆ ಇಂಗ್ಲೆಂಡ್‌ ತಂಡದ ಉಪನಾಯಕ ಹ್ಯಾರಿ ಬ್ರೂಕ್ ನಂಬರ್ 1 ಸ್ಥಾನವನ್ನು ಅಲಂಕರಿಸಿಕೊಂಡಿದ್ದರೆ, ಜೋ ರೂಟ್ ನಂಬರ್ 1 ರಿಂದ ನಂಬರ್ 2 ಸ್ಥಾನಕ್ಕೆ ಕುಸಿದಿದ್ದಾರೆ.

ಶುಭ್‌ಮನ್ ಗಿಲ್ ಇಂಗ್ಲೆಂಡ್ ಪ್ರವಾಸಕ್ಕೆ ಬಂದಾಗ, ವಿಮರ್ಶಕರು ಅವರ ತಂತ್ರವನ್ನು ಪ್ರಶ್ನಿಸುತ್ತಿದ್ದರು. ಆದರೆ ಮೊದಲ ಟೆಸ್ಟ್‌ನಲ್ಲಿಯೇ ಗಿಲ್ ಶತಕ ಗಳಿಸುವ ಮೂಲಕ ವಿಮರ್ಶಕರ ಬಾಯಿ ಮುಚ್ಚಿಸಿದರು. ಆದಾಗ್ಯೂ ಭಾರತ ಆ ಟೆಸ್ಟ್‌ನಲ್ಲಿ ಸೋಲನುಭವಿಸಿತು. ಇದರ ನಂತರ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗಿಲ್ ಅದ್ಭುತ ಪ್ರದರ್ಶನ ನೀಡಿದರು.

ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಬಾರಿಸಿದ್ದ ಗಿಲ್, ಎರಡನೇ ಇನ್ನಿಂಗ್ಸ್‌ನಲ್ಲಿ ಶತಕದ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ಎಡ್ಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಬರೋಬ್ಬರಿ 430 ರನ್ ಬಾರಿಸಿದ್ದರು. ಈ ಪ್ರದರ್ಶನದ ಆಧಾರದ ಮೇಲೆ, 807 ರೇಟಿಂಗ್ ಪಾಯಿಂಟ್ ಪಡೆದಿರುವ ಶುಭ್​ಮನ್ ಗಿಲ್ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಆರನೇ ಸ್ಥಾನದಲ್ಲಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026