LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತದ ಜನತೆಯೊಂದಿಗೆ ತಮ್ಮ ಮೊದಲ ಸಂದೇಶ ಹಂಚಿಕೊಂಡ ಗಗನಯಾತ್ರಿ ಶುಭಾಂಶು ಶುಕ್ಲಾ

ನವದೆಹಲಿ : ಸ್ಪೇಸ್‌ಎಕ್ಸ್‌ನ 'ಫಾಲ್ಕನ್-9' ರಾಕೆಟ್ ಬಾಹ್ಯಾಕಾಶಕ್ಕೆ ಹಾರುತ್ತಿದ್ದಂತೆ, ಮಿಷನ್‌ನ ಪೈಲಟ್ ಆಗಿರುವ ಭಾರತೀಯ ಗಗನಯಾತ್ರಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭಾರತದ ಜನತೆ ಜೊತೆ ತಮ್ಮ ಮೊದಲ ಸಂದೇಶ ಹಂಚಿಕೊಂಡಿದ್ದಾರೆ.

'ನಮಸ್ಕಾರ' ಎಂಬ ಪದದೊಂದಿಗೆ ಮಾತು ಆರಂಭಿಸಿದ ಅವರು, "ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ.. 41 ವರ್ಷಗಳ ನಂತರ ನಾವು ಬಾಹ್ಯಾಕಾಶವನ್ನು ತಲುಪಿದ್ದೇವೆ. ಇದು ಒಂದು ಉತ್ತಮ ಸವಾರಿಯಾಗಿತ್ತು" ಎಂದು ಹೇಳಿದ್ದಾರೆ.

"ರಾಕೆಟ್ ಸೆಕೆಂಡಿಗೆ 4.5 ಕಿ.ಮೀ ವೇಗದಲ್ಲಿ ಭೂಮಿಯ ಸುತ್ತಲೂ ಹಾರುತ್ತಿದೆ. ನನ್ನ ಭುಜದಲ್ಲಿ ಭಾರತೀಯ ತ್ರಿವರ್ಣ ಧ್ವಜವಿದೆ. ಧ್ವಜವು ಬಾಹ್ಯಾಕಾಶ ಹಾರಾಟದಲ್ಲಿ ಭಾರತವೇ ನನ್ನ ಜೊತೆಗಿದೆ ಎಂಬುದನ್ನು ನೆನಪಿಸುತ್ತದೆ" ಎಂದು ತಮ್ಮ ಆರಂಭಿಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಇದು ಐಎಸ್‌ಎಸ್‌ಗೆ ನನ್ನ ಪ್ರಯಾಣದ ಆರಂಭ ಮಾತ್ರವಲ್ಲ, ಭಾರತದ ಮಾನವ ಬಾಹ್ಯಾಕಾಶ ಹಾರಾಟದ ಆರಂಭವೂ ಆಗಿದೆ. ನೀವು ಪ್ರತಿಯೊಬ್ಬರೂ ಈ ಪ್ರಯಾಣದ ಭಾಗವಾಗಬೇಕೆಂದು ನಾನು ಬಯಸುತ್ತೇನೆ. ಭಾರತದ ಮಾನವ ಬಾಹ್ಯಾಕಾಶ ಕಾರ್ಯಕ್ರಮವನ್ನು ಒಟ್ಟಿಗೆ ಪ್ರಾರಂಭಿಸೋಣ. ಜೈ ಹಿಂದ್.. ಜೈ ಭಾರತ್.." ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026