Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾಗಿನೆಲೆ ಮಹಾಸಂಸ್ಥಾನ ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು: ಸಿದ್ದರಾಮಯ್ಯ 

ಬೆಂಗಳೂರು, ಜು 2: ಸಮಸ್ತ ಶೋಷಿತ ಸಮುದಾಯಗಳ ಮಹಾಸಂಸ್ಥಾನ ಆಗಬೇಕು ಎನ್ನುವ ಮಹಾ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ-ಸಮಾಜದ ಮಠ ಅಲ್ಲ. ಸರ್ವ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದರು.

ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಕಾಗಿನೆಲೆ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಯಶಸ್ವಿಯಾಗಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿರುವ ಪೀಠ ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿಯಾಗಿ ನಡೆಯುತ್ತಿದೆ ಎಂದರು.

ಚಾಚುತಪ್ಪದೆ ಜಾರಿ

ನಾವು ಚುನಾವಣೆ ವೇಳೆ ನೀಡಿರುವ ಐದೂ ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್ ನಲ್ಲೇ ಐದೂ ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಐದೂ ಘೋಷಣೆಗಳು ಜಾತಿ-ಧರ್ಮ ಮೀರಿದವುಗಳು. ಸರ್ವ ಜನಾಂಗದ ಬಡವರು ಮತ್ತು ಮಧ್ಯಮ ವರ್ಗದವರು ಬಹಳ ಸಂಕಷ್ಟದಲ್ಲಿದ್ದಾರೆ. ಇವರ ಸಂಕಷ್ಟ ನಿವಾರಣೆಗೆ ಈ ಐದು ಘೋಷಣೆಗಳನ್ನು ಈಡೇರಿಸುತ್ತಿದ್ದೇವೆ ಎಂದರು.

ನಾನು ಅಧಿಕಾರದಲ್ಲಿ ಇರುವವರೆಗೂ ಶೋಷಿತ ಜಾತಿಗಳಿಗೆ, ದಲಿತ ಸಮುದಾಯಗಳಿಗೆ, ಅಲ್ಪ ಸಂಖ್ಯಾತ ಸಮುದಾಯಗಳ, ಎಲ್ಲಾ ಜಾತಿಯ ಬಡವರ ಏಳಿಗೆಗೆ ಶ್ರಮಿಸುತ್ತೇನೆ. ಹೋರಾಟ ಮಾಡಿಯೇ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಾನು ಮತ್ತೆ ಚುನಾವಣೆಗೆ ನಿಲ್ಲುವುದಿಲ್ಲ. ಆದರೆ ಕೊನೆಯವರೆಗೂ ರಾಜಕಾರಣದಲ್ಲಿ ಕ್ರಿಯಾಶೀಲವಾಗಿರುತ್ತೇನೆ. ಬಡವರ ಪರ ರಾಜಕಾರಣ, ಹೋರಾಟ ಮುಂದುವರೆಸುತ್ತೇನೆ ಎಂದರು.

ಮಹಾಸಂಸ್ಥಾನದ ಪರಮಪೂಜ್ಯ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳಯ, ಶಾಖಾ ಮಠದ ಪೂಜ್ಯರುಗಳಾದ ಈಶ್ವರಾನಂದಪುರಿ ಮಹಾಸ್ವಾಮೀಜಿ, ಸಿದ್ದರಾಮಾನಂದಪುರಿ ಮಹಾಸ್ವಾಮೀಜಿ, ಶಿವಾನಂದಪುರಿ ಮಹಾಸ್ವಾಮೀಜಿ, ತ್ರಿದಂಡಿ ವೆಂಕಟರಾಮಾನುಜ ಮಹಾಸ್ವಾಮೀಜಿ, ಸಮಾಜದ ಮುಖಂಡರಾದ ಹೆಚ್.ವಿಶ್ವನಾಥ್, ಸಚಿವರಾದ ಭೈರತಿ ಸುರೇಶ್, ಶಾಸಕರಾದ ಎಸ್.ಟಿ.ಸೋಮಶೇಖರ್, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಕೆ.ಎಸ್.ಈಶ್ವರಪ್ಪ, ಬಂಡೆಪ್ಪ ಕಾಶಂಪುರ್, ಕೊಪ್ಪಳ ವಿವಿ ಕುಪಪತಿಗಳಾದ ಬಿ.ಕೆ.ರವಿ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸರ್ಕಾರದ ಅನುದಾನ ಬೇಡ-ಸಮಾಜದ ಬೆವರು ಸಾಕು

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ತಮ್ಮ ಆಶೀರ್ವಚನದಲ್ಲಿ, "ಶಾಖಾ ಮಠದ ನಿರ್ಮಾಣಕ್ಕೆ ನಾವು ಸರ್ಕಾರದ ಅನುದಾನ ಕೇಳುವುದಿಲ್ಲ, ಸಮಾಜದ ಬೆವರು ಮತ್ತು ಶ್ರಮ ಸಾಕು ಎಂದು ಘೋಷಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್ ಅವರು ಶ್ರೀಮಠದ ನಿರ್ಮಾಣಕ್ಕೆ ವೈಯುಕ್ತಿಕವಾಗಿ 50 ಲಕ್ಷ ರೂಗಳ ಅನುದಾನ ನೀಡುವುದಾಗಿ ಘೋಷಿಸಿದರು. ಬಳಿಕ ಹಲವರು ತಮ್ಮ ತಮ್ಮ ಶಕ್ತಿಯನುಸಾರ 50 ಸಾವಿರ ರೂಪಾಯಿಯಿಂದ 25 ಲಕ್ಷ ರೂಪಾಯಿವರೆಗೂ ತಮ್ಮ ನೆರವನ್ನು ಘೋಷಿಸಿದರು.

ಸಿದ್ದರಾಮಯ್ಯರ ಸರ್ಕಾರದ ಅನುದಾನದಲ್ಲಿ ನಾನು ಮತ್ತೆ ಶಾಸಕನಾದೆ

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಮಾತನಾಡಿ, 2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯನಾಗಿ, ಅಭಿಮಾನಿಯಾಗಿ ಶಾಖಾಮಠದ ನಿರ್ಮಾಣಕ್ಕೆ ಅಗತ್ಯ ಇರುವ ಎಲ್ಲಾ ನೆರವನ್ನೂ ನೀಡುತ್ತೇನೆ ಎಂದು ಘೋಷಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ