LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜ್ಯದಲ್ಲಿ ಯಾವತ್ತೂ ಸ್ವಂತ ಬಲದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ'- ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಯಾವತ್ತೂ ಸ್ವಂತ ಬಲದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಗರದ ಫ್ರೀಡಂಪಾರ್ಕ್​ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು 16 ಸ್ಥಾನ ಗೆಲ್ಲಬೇಕಿತ್ತು, ಆದರೆ ಬಿಜೆಪಿ ಮತಗಳ್ಳತನ ಮಾಡಿದ್ದರಿಂದ ನಾವು ಕೇವಲ 9 ಕ್ಷೇತ್ರಗಳಲ್ಲಿ ಗೆದ್ದೆವು. ಈ ಪ್ರತಿಭಟನಾ ರ‍್ಯಾಲಿ ಕರ್ನಾಟಕದಿಂದ ಪ್ರಾರಂಭವಾಗಿದೆ. ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮಾಡಿ ಅನೇಕ ವಿಚಾರ ಹೇಳಿದ್ದಾರೆ. ರಾಹುಲ್ ಗಾಂಧಿ ರಾಜಕಾರಣಿಯಾಗಿ ಆರೋಪ ಮಾಡಿಲ್ಲ, ಅಧ್ಯಯನ ಮಾಡಿ ಸಾಕ್ಷ್ಯಾಧಾರ ಇಟ್ಟುಕೊಂಡು ಮಾತನಾಡಿದ್ದಾರೆ ಎಂದು ತಿಳಿಸಿದರು.

ಸಂವಿಧಾನ ಜಾರಿಯಾದ ಮೇಲೆ ಒಬ್ಬ ವ್ಯಕ್ತಿಗೆ ಒಂದು ವೋಟ್. ಚುನಾವಣಾ ಆಯೋಗ ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು. ಸಂವಿಧಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಮತದಾನದ ಹಕ್ಕು ಕೊಟ್ಟಿದ್ದು, ಮತದಾನ ನಮ್ಮ ಮೂಲಭೂತ ಹಕ್ಕು, ನಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ಅಷ್ಟೇ ಅಲ್ಲ, ಇಡೀ ದೇಶದಲ್ಲಿ ಮತಗಳ್ಳತನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಮೋದಿ ಬಹುಮತ ಗಳಿಸಿರಲಿಲ್ಲ. ಅಕ್ರಮದ ಮೂಲದ ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಮೋದಿಗೆ ಪ್ರಧಾನಿ ಸ್ಥಾನದಲ್ಲಿ ಇರಲು ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನವನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಸಂವಿಧಾನ ಉಳಿದರೆ ಮಾತ್ರ ನಾವೆಲ್ಲರೂ ಉಳಿಯಲು ಸಾಧ್ಯ. ಹಾಗಾಗಿ ರಾಹುಲ್ ಗಾಂಧಿ ಹೋರಾಟಕ್ಕೆ ಕೈಜೋಡಿಸಬೇಕು ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026