Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಬಿಜೆಪಿಯವರು ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ: ಸಿದ್ದರಾಮಯ್ಯ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೋದಿ ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

KPCC ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ದಾಖಲೆಗಳನ್ನು, ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರದ ದಾಖಲೆಗಳನ್ನು ವಿವರಿಸಿ ಮಾತನಾಡಿದರು.

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಬಿಜೆಪಿ ಮತಗಳ್ಳತನದ ಮೂಲಕ‌ಅನೇಕ ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಅಧಿಕಾರಕ್ಕೆ ಬಂದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ತಪಸಣೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಸಿದ್ದಾರೆ ಎಂದು ವಿವರಿಸಿದರು.

ಸಂವಿಧಾನಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ಪ್ರಜಾಪ್ರಭುತ್ವಕ್ಕೆ ಎಸಗಿದ ವಂಚನೆ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯ ಸ್ಥಾನಮಾನವನ್ನು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ನೀಡಿದ್ದಾರೆ. ಪ್ರಭುತ್ವ ಚುನಾವಣಾ ಪ್ರಕ್ರಿಯಿಯಲ್ಲಿ ಮೂಗು ತೂರಿಸಬಾರದು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಅದಕ್ಕಾಗಿ ಮುಕ್ತ ಮತ್ತು ಪಾರದರ್ಶಕ ಚುನಾವಣಾ ವ್ಯವಸ್ಥೆಯನ್ನು ನಮ್ಮ ಸಂವಿಧಾನ ರೂಪಿಸಿದೆ. ಸಂವಿಧಾನದ ಮೌಲ್ಯ ಉಳಿಯಬೇಕಾದರೆ ಸ್ವತಂತ್ರ ಚುನಾವಣಾ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳುವುದು ಎಲ್ಲಾ ಪಕ್ಷಗಳ ಜವಾಬ್ದಾರಿ ಎಂದರು.

ಆದ್ದರಿಂದ ನಾವು ಸಂವಿಧಾನದ ಮತ್ತು ಪ್ತಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.

ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೂ ಸಚಿವರೂ ಆದ ಸತೀಶ್ ಜಾರಕಿಹೊಳಿ, ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಂಜುನಾಥ್ ಸೇರಿ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು‌.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ