
ಅವರು ಇಂದು ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ರವರ ಚುಕ್ಕೆ ಗುರುತಿನ ಪ್ರಶ್ನೆ 621ಗೆ ಉತ್ತರಿಸಿದರು. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಸತಿನಿಲಯಗಳನ್ನು ನಿರ್ಮಿಸುವ ಅಗತ್ಯತೆಯನ್ನು ತಿಳಿಸಿ, ಈ ಬಗ್ಗೆ ಮಾಹಿತಿ ಕೋರಿದರು.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಭಾಗದ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಕ್ಕೆ ಸೇರಿದ ವಿವಿಧ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವಂತೆ ಯಲ್ಲಾಪುರದಲ್ಲಿ ವಸತಿ ನಿಲಯವನ್ನು ನಿರ್ಮಿಸಲು, ಮುಂದಿನ ಆಯವ್ಯಯದಲ್ಲಿ ಒಳಪಡಿಸಲು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.