ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಕರೆ ನೀಡಿರುವ ವಿಚಾರವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಅವರನ್ನು ಯಾವ ಕಾರಣಕ್ಕೆ ಕರೆದಿದ್ದಾರೆ ಎಂಬ ಮಾಹಿತಿ ನನಗೆ ಇಲ್ಲ, ಈ ಕುರಿತು ಅವರು ನನ್ನೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.
ಸಿಎಂ ಈ ಬಗ್ಗೆ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್‌ನಿಂದ ತಮಗೂ ಯಾವುದೇ ಕರೆ ಬಂದಿಲ್ಲ. ಕರೆ ಬಂದರೆ ಖಂಡಿತವಾಗಿ ಹೋಗುತ್ತೇನೆ ಎಂದು ಹೇಳಿದರು. ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತು ಸಿಎಂ ಅವರನ್ನು ಕರೆದಿರಬಹುದೇ ಎಂಬ ಪ್ರಶ್ನೆಗೆ, ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಷ್ಟೇ ಉತ್ತರಿಸಿದರು. ಸದ್ಯಕ್ಕೆ ಹೈಕಮಾಂಡ್‌ನಿಂದ ಮತ್ತಷ್ಟು ಸೂಚನೆಗಳು ಬಂದಿಲ್ಲ. ಇಂದು ಎಸ್‌ಐಆರ್ ಹಾಗೂ ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ನಾನು, ಸಿಎಂ ಮತ್ತು ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಸಭೆ ನಡೆಸಲಿದ್ದೇವೆ. ಅದನ್ನು ಬಿಟ್ಟು ಬೇರೆ ಯಾವುದೇ ಮಾಹಿತಿ ನನ್ನ ಬಳಿ ಇಲ್ಲ ಎಂದು ಹೇಳಿದರು.