Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಸಂವಿಧಾನ ವಿರೋಧಿ ಶಕ್ತಿಗಳು ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿದ್ದರಾಮಯ್ಯ ಎಚ್ಚರಿಕೆ

 

ಬೆಂಗಳೂರು :
ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಅಭೂತಪೂರ್ವ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.

We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ.
ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ.

ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ,ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

*ಭಾಷಣದ ಇತರೆ ಹೈಲೈಟ್ಸ್*

ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು.

ಬುದ್ದ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ.

ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ