LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜಿನಾಮೆ ಕೊಡುವುದು ಉಚಿತ

ಶಿವಮೊಗ್ಗ,ಸೆ.04: ನ್ಯಾಯಾಲಯ ಪ್ರಾಸಿಕ್ಯೂಷನ್ ಗೆ ಕೊಡುವ ಮುಂಚೆ ಸಿಎಂ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಉಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಸ್ವಗೃಹದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಬಿಎಸ್ ವೈ, ಸೆ. 11 ಕ್ಕೆ ನ್ಯಾಯಾಲಯದ ತೀರ್ಪು ಬರುತ್ತದೆ. ತೀರ್ಪು ಬಂದ ನಂತರ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ.

ಯಾಕೆಂದರೆ ಸಿಎಂ ಸಿದ್ದರಾಮಯ್ಯ ಮಾಡಿರುವ ಹಗರಣಗಳು ಸಾರ್ವಜನಿಕವಾಗಿದೆ. ಯಾವುದೇ ಕಾರಣಕ್ಕೆ ಸಿದ್ದರಾಮಯ್ಯನವರಿಗೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದಕ್ಕಿಂತ ಮೊದಲೇ ಗೌರವಯುತವಾಗಿ ರಾಜೀನಾಮೆ ಕೊಡುವುದು ಒಳ್ಳೆಯದು ಅವರು ಮಾಡಿರುವ ಎಲ್ಲಾ ಹಗರಣ ಸಾಬೀತಾಗುತ್ತಿವೆ.

ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.ಮೂಡಾ ಹಗರಣ ಜಗಜ್ಜಾಹೀರಾಗಿದೆ. ಬಿಜೆಪಿ ಸರಕಾರದ ಅವಧಿಯ ಕೋವಿಡ್ ವರದಿ ವಿಚಾರದ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳಲು ಸರಕಾರಕ್ಕೆ ಸ್ವಾತಂತ್ರ್ಯ ಇದೆ.

ಯಾವುದೇ ತೀರ್ಮಾನ ತೆಗೆದುಕೊಳ್ಳಲಿ ಎಂದ ಅವರು, ನಾವು ಯಾವುದೇ ಹೋರಾಟ ಮಾಡುವುದಿಲ್ಲ. ರಾಜ್ಯಪಾಲರು ಇನ್ನುಳಿದ ನಾಲ್ವರು ಸಚಿವರಿಗೆ ನೋಟೀಸ್ ಕೊಟ್ಟಿದ್ದಾರೆ. ಅವರು ಸರ್ವ ಸ್ವತಂತ್ರ ಇದ್ದಾರೆ. ಎಲ್ಲರಿಗೂ ನೋಟೀಸ್ ಕೊಟ್ಟಿದ್ದಾರೆ. ಏನು ಬೇಕಾದರೂ ತೀರ್ಮಾನ ತೆಗೆದುಕೊಳ್ಳಲಿ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST