ಇಂದಿನ ವಚನ: - -ತೋಂಟದ ಸಿದ್ಧಲಿಂಗ ಶಿವಯೋಗಿಗಳು
ನಿತ್ಯ ನಿಮ್ಮ ಬಿಸಿ ಸುದ್ದಿಯಲ್ಲಿ 12 ನೇ ಶತಮಾನದಲ್ಲಿ ಶರಣರು ರಚಿಸಿದ ವಚನಗಳನ್ನು ನಿಮ್ಮಗಳ ಅವಗಾಹನೆಗೆ
ವಚನ:
ಕೆರೆಯೊಡೆದ ಬಳಿಕ ತೂಬು ತಡೆಯಬಲ್ಲುದೇ?.
ಒಡೆದ ಮಡಕೆಗೆ ಒತ್ತುಮಣ್ಣಕೊಟ್ಟರೆ ನಿಲಬಲ್ಲುದೇ ಅಯ್ಯ?.
ಮುತ್ತೊಡೆದರೆ ಹತ್ತಬಲ್ಲುದೇ?.
ಸುರಚಾಪ ನಿರ್ಧರವಾಗಬಲ್ಲುದೇ ಅಯ್ಯ?.
ಚಿತ್ತವೊಡೆದರೆ ಭಕ್ತಿ ನೆಲೆಗೊಳ್ಳದು.
ಭಕ್ತಿ ಬೀಸರವಾದರೆ, ಮುಕ್ತಿಯೆಂಬುದು ಎಂದಿಗೂ ಇಲ್ಲ ಕಾಣಾ.
ಇದು ಕಾರಣ,
ಚಿತ್ತ ಲಿಂಗವನಪ್ಪಿ ಒಡೆಯದೆ,
ಭಕ್ತಿ ಬೀಸರವೊಗದೆ,
ನಿಮ್ಮ ಕೂಡಿ, ನಿತ್ಯ ನಿರ್ಮುಕ್ತನಾದೆನು ಕಾಣಾ.
ಎಲ್ಲರ ಪರಿಯಲ್ಲ, ಎನ್ನ ಪರಿ ಬೇರೆ ನೋಡಾ,ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
-ತೋಂಟದ ಸಿದ್ಧಲಿಂಗ ಶಿವಯೋಗಿಗಳು
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.