Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.

500 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬಂಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.

ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಮಾನ್ಯ ಸಚಿವರು ವಿವರಿಸಿದರು. 

ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ ವರದಿಯನ್ನು ದಿನಾಂಕ: 17.07.2023 ರಂದು 15ನೇ ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ.

ಈ ವರದಿಯ ಆಧಾರದ ಮೇಲೆ ಸತ್ಯಸಂಶೋಧನೆ ಮಾಡಿ ವರದಿ ನೀಡಲು ಕುನ್ಹಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗವು 12 ವಿಶ್ಲೇಷಣಾ ವರದಿಗಳನ್ನು ನೀಡಿದೆ ಎಂದು ಸಚಿವರು ವಿವರಿಸಿದರು.

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ