LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ ಬುರುಡೆ ಪ್ರಕರಣ: ಸ್ಫೋಟಕ ಮಾಹಿತಿ ನೀಡಿದ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟಿರುವ ಪ್ರಕರಣದ ತನಿಖೆ ಮುಕ್ತಾಯ ಹಂತದಲ್ಲಿದ್ದು, ಶೀಘ್ರದಲ್ಲೇ ಚಾರ್ಜ್​ ಶೀಟ್​ ಕೂಡ ಸಲ್ಲಿಕೆಯಾಗುತ್ತದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಇದೀಗ ಎಸ್​ಐಟಿ (SIT) ಮುಖ್ಯಸ್ಥ ಪ್ರಣಬ್ ಮೊಹಂತಿ ತನಿಖೆ ಇನ್ನು ಮುಗಿದಿಲ್ಲ ಎಂದು ಹೇಳುವ ಮೂಲಕ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಕೊಟ್ಟಿದ್ದಾರೆ.

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸಲೆಂದು ಎಸ್​ಐಟಿ ರಚಿಸಿದ ಸರ್ಕಾರ ಮುಖ್ಯಸ್ಥರಾಗಿ ಪ್ರಣಬ್ ಮೊಹಂತಿ ಅವರನ್ನ ನೇಮಕ ಮಾಡಿತು. ತಕ್ಷಣ ಕಾರ್ಯ ಪ್ರವೃತ್ತರಾದ ಮೊಹಂತಿ ತಂಡ ಬೆಳ್ತಂಗಡಿಯಲ್ಲಿ ಕಚೇರಿಗೆ ಆಗಮಿಸಿ ತನಿಖೆ ಶುರು ಮಾಡಿತು. ದಟ್ಟ ಕಾಡುಗಳಲ್ಲಿ ಶವಗಳಿಗಾಗಿ ಶೋಧ ನಡೆಸಿತು. ಬಳಿಕ ದೂರು ಕೊಟ್ಟ ಚಿನ್ನಯ್ಯನನ್ನು ಬಂಧಿಸಿ ವಿಚಾರಣೆ ನಡೆಸಲಾಯಿತು. ಕೇಸ್ ಸಂಬಂಧ ಹಲವರನ್ನು ವಿಚಾರಣೆ ನಡೆಸಿದ ಎಸ್​ಐಟಿ ಮುಖ್ಯಸ್ಥರು, ಹಲವರಿಗೆ ನೋಟೋಸನ್ನೂ ನೀಡಿದ್ದರು. ಪ್ರಕರಣದ ತನಿಖೆ ಮಂದಗತಿಯಲ್ಲಿ ಸಾಗುತ್ತಿರುವಂತೆ ಭಾಸವಾಗುತ್ತಿದೆ. ಈ ನಡುವೆ ಪ್ರಣಬ್ ಮೊಹಂತಿ ಇನ್ನು ಕೂಡ ತನಿಖೆ ಮುಕ್ತಾಯಗೊಂಡಿಲ್ಲ ಎಂದು ಹೇಳುವ ಮೂಲಕ ಸ್ಫೋಟಕ ತಿರುವು ನೀಡಿದ್ದಾರೆ.

ಚಾರ್ಜ್ ಶೀಟ್ ಸಿದ್ಧಗೊಂಡಿದೆ ಅಂತ ಯಾರು ಹೇಳಿದ್ದು, ಪ್ರಕರಣ ಇನ್ನೂ ಇನ್ನೂ ತನಿಖೆ ಹಂತದಲ್ಲಿದೆ. ತನಿಖೆ ಪೂರ್ಣಗೊಂಡಿಲ್ಲ‌. ಅರೆಸ್ಟ್ ಮಾಡುವುದೇ ತನಿಖೆಯಲ್ಲ ಎಂದು ಪ್ರಣಬ್ ಮೊಹಂತಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ಸದ್ದಿಲ್ಲದೆ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಸಲಿ ಸತ್ಯ ಏನು ಎನ್ನುವುದು ಬಯಲಿಗೆ ಬರುವ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026