ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ ಆರು ಮಂದಿ ಸಾವು.!
ಕೇದಾರನಾಥ: ಉತ್ತರಾಖಂಡದ ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನಗೊಂಡಿದ್ದು, ಹೆಲಿಕಾಪ್ಟರ್ನಲ್ಲಿ ಪೈಲಟರ್ ಸೇರಿ 6 ಮಂದಿ ಇದ್ದರು ಎಂದು ಹೇಳಲಾಗುತ್ತಿದ್ದು, ಎಲ್ಲರೂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಗೆ ಕೆಟ್ಟ ಹವಾಮಾನದಿಂದಾಗಿ ಅಪಘಾತ ಸಂಭವಿಸಿದೆ. ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ತಲುಪಿವೆ. ರಕ್ಷಣಾ ಕಾರ್ಯವು ತೊಂದರೆಗಳನ್ನು ಎದುರಿಸುತ್ತಿದೆ. ಹೆಲಿಕಾಪ್ಟರ್‌ನ ಅವಶೇಷಗಳು ಸ್ಥಳದಲ್ಲಿ ಚದುರಿಹೋಗಿವೆ. ಹುಲ್ಲು ಕತ್ತರಿಸುತ್ತಿದ್ದ ಮಹಿಳೆಯರು ಹೊಗೆಯನ್ನು ನೋಡಿದ ನಂತರ ಘಟನೆಯ ಬಗ್ಗೆ ಕೂಡಲೇ ಮಾಹಿತಿ ನೀಡಿದ್ದಾರೆ.
ಹೆಲಿಕಾಪ್ಟರ್ ಆರ್ಯನ್ ಏವಿಯೇಷನ್‌ನದು ಎಂದು ಹೇಳಲಾಗುತ್ತಿದೆ. ಈ ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ಹೋಗುತ್ತಿದ್ದಾಗ ತ್ರಿಜುಗಿನಾರಾಯಣ ಮತ್ತು ಗೌರಿಕುಂಡ್ ನಡುವೆ ನಾಪತ್ತೆಯಾಗಿದ್ದು ಅಪಘಾತಕ್ಕೀಡಾಗಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.