LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿತ್ರದುರ್ಗ: ಕರ ವಸೂಲಾತಿ ಹೆಚ್ಚಿನ  ಮಹತ್ವ ನೀಡಿ: ಎಸ್.ಜೆ.ಸೋಮಶೇಖರ್

 

ಚಿತ್ರದುರ್ಗಗೆ ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಜಾಥಾ, ಟಾಂ ಟಾಂ, ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಿ, ಕರ ವಸೂಲಾತಿ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳು ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಗ್ರಾಮ ಪಂಚಾಯಿತಿಗಳಲ್ಲಿ ಕಡಿಮೆ ಕರ ವಸೂಲಾತಿ ಮಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕರ ವಸೂಲಿಗಾರರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ 189 ಗ್ರಾಮ ಪಂಚಾಯಿತಿಗಳಲ್ಲಿ ಇಲ್ಲಿವರೆಗೂ ಶೇ.33.80ರಷ್ಟು ಪ್ರಗತಿ ಸಾಧಿಸಲಾಗಿದ್ದು, ಜಿಲ್ಲಾವಾರು ಪ್ರಗತಿಗೆ ಹೋಲಿಸಿದಾಗ ಚಿತ್ರದುರ್ಗ ಜಿಲ್ಲೆಯು ತುಂಬಾ ಕಡಿಮೆ ಪ್ರಗತಿ ಸಾಧಿಸಲಾಗಿದೆ. ಆದ್ದರಿಂದ ಕಡಿಮೆ ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿಗಳಲ್ಲಿ ಜಾಥಾ ಮೂಲಕ, ಟಾಂ ಟಾಂ ಮೂಲಕ, ಸ್ವಚ್ಛ ವಾಹಿನಿ ಆಟೋ ಮೂಲಕ ಹೆಚ್ಚು ಹೆಚ್ಚು ಪ್ರಚಾರಗೊಳಿಸಬೇಕು. ಹಾಗೆಯೇ ಪ್ರತಿ ಮನೆ ಮನೆಗೂ ಭೇಟಿ ನೀಡಿ ಗ್ರಾಮಸ್ಥರ ಮನವೋಲಿಸಿ, ಹೆಚ್ಚಿನ ತೆರಿಗೆ ಸಂಗ್ರಹಣೆ ಮಾಡಲು ಸೂಚನೆ ನೀಡಿದ ಅವರು, ಇನ್ನೂ ಒಂದು ತಿಂಗಳೊಳಗೆ ಕಡ್ಡಾಯವಾಗಿ ಶೇ.80ರಷ್ಟು ಕರ ವಸೂಲಾತಿ ಹೆಚ್ಚಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹೆಚ್ಚು ಕರವಸೂಲಿ ಮಾಡಿದ ಪಿಡಿಒ, ಬಿಲ್ ಕಲೆಕ್ಟರ್‍ಗೆ ಸನ್ಮಾನ: ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಕರ ವಸೂಲಿ ಮಾಡಿದ ಸಂಬಂಧಪಟ್ಟ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಬಿಲ್ ಕಲೆಕ್ಟರ್‍ಗಳನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್ ತಿಳಿಸಿದರು.

ಕರ ವಸೂಲಾತಿಯಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಪಿಡಿಒ ಹಾಗೂ ಬಿಲ್ ಕಲೆಕ್ಟರ್‍ಗಳ ವಿರುದ್ಧ  ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನೂ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ., ಸಹಾಯಕ ಕಾರ್ಯದರ್ಶಿ ಎನ್.ರವಿ, ಸಹಾಯಕ ನಿರ್ದೇಶಕ (ಆಡಳಿತ) ದಾದಾಪೀರ್, ಸಹಾಯಕ ಡಿಪಿಎಂಯು ಸೈಯಿದಾ ಪಿಜಾ ಇರಮ್ ಸೇರಿದಂತೆ ಗ್ರಾಮ  ಪಂಚಾಯಿತಿ ಪಿಡಿಒ ಹಾಗೂ ಬಿಲ್ ಕಲೆಕ್ಟರ್‍ಗಳು ಇದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!ಸರ್ವಾರ್ಥ ಸಿದ್ಧಿ ಯೋಗ: ಲವರ್ ಸಪೋರ್ಟ್, ಶತ್ರುಗಳು ಉಡೀಸ್! ಈ 5 ರಾಶಿಗಳಿಗೆ ಶುಕ್ರದೆಸೆ