LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

6 ವರ್ಷಗಳ ನಂತರ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಮೃತಿ ಮಂಧಾನ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ ಈ ಬಾರಿ 727 ಅಂಕಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನಕ್ಕೇರಿದ್ದಾರೆ. ವಿಶೇಷ ಎಂದರೆ ಸ್ಮೃತಿ ಮಂಧಾನ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ನಲ್ಲಿ ಕಾಣಿಸಿಕೊಂಡಿಲ್ಲ.

ಅಷ್ಟೇ ಅಲ್ಲದೆ ಐಸಿಸಿ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಸ್ಮೃತಿ ಮೊದಲ ಸ್ಥಾನಕ್ಕೇರುತ್ತಿರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2019 ರಲ್ಲಿ ಅವರು ಅಗ್ರಸ್ಥಾನ ಅಲಂಕರಿಸಿದ್ದರು. ಆದರೆ ಈ ಬಾರಿ ನಡೆದ ಸೌತ್ ಆಫ್ರಿಕಾ, ಶ್ರೀಲಂಕಾ ನಡುವಣ ತ್ರಿಕೋನ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸ್ಮೃತಿ ಮಂಧಾನ 6 ವರ್ಷಗಳ ಬಳಿಕ ಐಸಿಸಿ ಏಕದಿನ ಬ್ಯಾಟರ್​ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಮೃತಿ ಮಂಧಾನ ಅವರ ನಂತರದ ಸ್ಥಾನದಲ್ಲಿ ಇಂಗ್ಲೆಂಡ್​ನ ನಟಾಲಿ ಸ್ಕಿವರ್-ಬ್ರಂಟ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಮೂರನೇ ಸ್ಥಾನವನ್ನು ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ ಪಡೆದುಕೊಂಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026