LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಸ್ಮೃತಿ ಮಂಧಾನ ಆಯ್ಕೆ

ಮುಂಬೈ :ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನಗೆ 2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಐಸಿಸಿ ಆಯ್ಕೆ ಮಾಡಿದೆ.

ಕಳೆದ ವರ್ಷ ಏಕದಿನ ಕ್ರಿಕೆಟ್​ನಲ್ಲಿ 13 ಇನ್ನಿಂಗ್ಸ್​ಗಳನ್ನು ಆಡಿದ್ದ ಮಂಧಾನ ನಾಲ್ಕು ಭರ್ಜರಿ ಶತಕಗಳ ಸಹಿತ ಬರೋಬ್ಬರಿ 747 ರನ್ ಕಲೆಹಾಕಿದ್ದರು. ಈ ಮೂಲಕ ಕಳೆದ ವರ್ಷ ಏಕದಿನ ಮಾದರಿಯಲ್ಲಿ ಅತ್ಯಧಿಕ ರನ್ ಕಲೆಹಾಕಿದ ಮಹಿಳಾ ಕ್ರಿಕೆಟರ್​ಗಳ ಪಟ್ಟಿಯಲ್ಲಿ ಮಂಧಾನ ಅಗ್ರಸ್ಥಾನವನ್ನು ಪಡೆದುಕೊಂಡಿದ್ದರು.

ಮಂಧಾನ ಬಳಿಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ದಕ್ಷಿಣ ಆಫ್ರಿಕಾ ತಂಡದ ಲಾರಾ ವೋಲ್ವಾರ್ಡ್ಟ್ 697 ರನ್ ಹಾಗೂ ಟ್ಯಾಮಿ ಬ್ಯೂಮಾಂಟ್ 554 ರನ್ ಮತ್ತು ಹೇಲಿ ಮ್ಯಾಥ್ಯೂಸ್ 469 ರನ್ ಕಲೆಹಾಕಿದ್ದಾರೆ.

2024 ರ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಗೆ ಭಾಜನರಾಗುವ ಮೂಲಕ ಮಂಧಾನ ತಮ್ಮ ವೃತ್ತಿ ಬದುಕಿನಲ್ಲಿ ನಾಲ್ಕನೇ ಐಸಿಸಿ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ. 2018 ರಲ್ಲಿ ಮೊಟ್ಟ ಮೊದಲ ಬಾರಿಗೆಮಹಿಳಾ ಏಕದಿನ ಕ್ರಿಕೆಟರ್​ ಪ್ರಶಸ್ತಿ ಗೆದ್ದಿದ್ದ ಮಂಧಾನ, ಅದೇ ವರ್ಷ 2018 ರ ವರ್ಷದ ಮಹಿಳಾ ಕ್ರಿಕೆಟರ್ ಗೌರವಕ್ಕೂ ಭಾಜನರಾಗಿದ್ದರು. 2021ರ ವರ್ಷದ ಮಹಿಳಾ ಕ್ರಿಕೆಟರ್ ಪ್ರಶಸ್ತಿಯನ್ನು ಎರಡನೇ ಬಾರಿಗೆ ಗೆದ್ದುಕೊಳ್ಳುವಲ್ಲಿ ಯಶಸ್ಸಿಯಾದರು.

ಇದೀಗ 2024 ರಲ್ಲಿ ಮಂಧಾನ ಎರಡನೇ ಬಾರಿಗೆ ವರ್ಷದ ಮಹಿಳಾ ಏಕದಿನ ಕ್ರಿಕೆಟರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಈ ಮೂಲಕ ನಾಲ್ಕು ಐಸಿಸಿ ಪ್ರಶಸ್ತಿಗಳನ್ನು ಗೆದ್ದ ಮೊದಲ ಭಾರತೀಯ ಮಹಿಳಾ ಕ್ರಿಕೆಟರ್ ಎಂಬ ದಾಖಲೆ ಬರೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು.!ಕನ್ನಡ ಚಲನಚಿತ್ರಗಳ ಬಿಡುಗಡೆಗೆ ಶೀಘ್ರದಲ್ಲಿ ಓಟಿಟಿ ಪ್ರಾರಂಭ :ಮೆಹಬೂಬ್ ಪಾಷಾನ.08 ರಂದು ಕನಕ ಜಯಂತಿ, ಕನಕಶ್ರೀ ಸೇವಾರತ್ನ ಪ್ರಶಸ್ತಿ, ಸಮಾಜದ ಸಾಧಕರಿಗೆ ಸನ್ಮಾನ ಬಿ.ಟಿ.ಜಗದೀಶ್.!ತಲೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಯುವಂತೆ ಮಾಡಲು ಸಾಧ್ಯವಿಲ್ಲ : ಅಣ್ಣಾಮಲೈಮಚ್ಚಿನಿಂದ ಕೊಚ್ಚಿ ಒಂದೇ ಕುಟುಂಬದ ಮೂವರನ್ನು ಕೊಂದು ವ್ಯಕ್ತಿ ಆತ್ಮಹತ್ಯೆವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಐಎಎಸ್ ಕೋಮಲ್ ಪುನಿಯಾ ಯಶಸ್ಸಿನ ಕಥನಅಂದುಕೊಂಡಂತೆ ಕೆಲಸ ಕಾರ್ಯಗಳು ಕ್ಷಣಾರ್ಧದಲ್ಲಿಯೇ ನೆರವೇರಬೇಕೆಂದರೆ ಈ ಒಂದೇ ಒಂದು ಬಲಿಷ್ಠ ತಾಂತ್ರಿಕ ಬೇರನ್ನು ನಿಮ್ಮ ಹತ್ತಿರ ಇಟ್ಟುಕೊಂಡು ನೋಡಿ ಸಾಕು!ಬಟ್ಟೆ ಒಗೆಯಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು.!ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ.!