Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬಡವರ ಅಕ್ಕಿ ಕಳ್ಳ ಸಾಗಣೆ: ಸುರಪುರದಲ್ಲಿ ಜಯ ಕರ್ನಾಟಕ ಸಂಘಟನೆ ದಾಳಿ

ಸುರಪುರ: ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ರಾತ್ರೋರಾತ್ರಿ ಅಕ್ರಮವಾಗಿ ಕಳ್ಳ ಸಾಗಾಣಿಕೆ ಮಾಡುತ್ತಿರುವ ಪ್ರಕರಣವನ್ನು ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಸಮಿತಿ ಕಾರ್ಯಾಚರಣೆ ನಡೆಸಿ ಬಹಿರಂಗಪಡಿಸಿರುವ ಘಟನೆ ಸುರಪುರ ತಾಲ್ಲೂಕಿನಲ್ಲಿ ನಡೆದಿದೆ. ಘಟನೆ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದ್ದು, ಪಡಿತರ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿದೆ.

ಸುರಪುರ ನಗರಸಭೆ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಸಂಖ್ಯೆ 123 ಕಬಡಗೇರಾ ಪ್ರದೇಶದಲ್ಲಿ ಇರುವ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ರಮ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಮಾರ್ಚ್ 31 ತಡರಾತ್ರಿ ಸರಕು ಸಾಗಾಣಿಕೆ ವಾಹನವು ಅಂಗಡಿ ಮುಂದೆ ನಿಲ್ಲಿಸಿ ಅಕ್ಕಿ ಚೀಲಗಳನ್ನು ವಾಹನಕ್ಕೆ ಲೋಡ್ ಮಾಡಲಾಗುತ್ತಿತ್ತು. ಸಂಶಯಾಸ್ಪದ ಚಟುವಟಿಕೆಯನ್ನು ಗಮನಿಸಿದ ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಯಲ್ಲಪ್ಪ ನಾಯಕ ಅವರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಜಿಯೋ ಟ್ಯಾಗ್ ಸಹಿತವಾಗಿ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ.

ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಸಂಘಟನೆಯ ಸದಸ್ಯರು ಪಡಿತರ ವಿತರಕರನ್ನು ಪ್ರಶ್ನಿಸಿದಾಗ ಸಮಂಜಸವಾದ ಉತ್ತರ ದೊರಕಲಿಲ್ಲ ಎಂದು ತಿಳಿದುಬಂದಿದೆ. ಇದರಿಂದ ಅನುಮಾನ ಮತ್ತಷ್ಟು ಗಟ್ಟಿಯಾಗಿದ್ದು, ಅಕ್ರಮ ಪಡಿತರ ಸಾಗಾಣಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಬಲ ಬಂದಿದೆ.

ಸಂಘಟನೆಯ ಆರೋಪದ ಪ್ರಕಾರ, ನ್ಯಾಯಬೆಲೆ ಅಂಗಡಿ ಮಾಲೀಕರು ಬಡವರಿಗೆ ನೀಡಬೇಕಾದ ಪಡಿತರದಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆಸುತ್ತಿದ್ದರು. ಪ್ರತಿ ವಿತರಣೆಯಲ್ಲೂ ಸುಮಾರು 2 ಕೆಜಿ ಅಕ್ಕಿಯನ್ನು ಕಡಿತ ಮಾಡಲಾಗುತ್ತಿದ್ದು, ಅದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ. ಇದರಿಂದ ಬಡ ಜನರಿಗೆ ಸಿಗಬೇಕಾದ ಅಕ್ಕಿ ಪ್ರಮಾಣ ಕಡಿಮೆಯಾಗುತ್ತಿದ್ದು, ಅವರ ಹಕ್ಕು ಹರಣವಾಗುತ್ತಿದೆ ಎಂಬ ಆಕ್ರೋಶ ವ್ಯಕ್ತವಾಗಿದೆ.

ಇನ್ನೊಂದು ಗಂಭೀರ ಆರೋಪವೆಂದರೆ, ನಿರಕ್ಷರ ಹಾಗೂ ಅಸಹಾಯಕರಾದ ಜನರಿಗೆನಿಮ್ಮ ಕಾರ್ಡಿಗೆ ಪಡಿತರ ಬಂದಿಲ್ಲಎಂದು ತಪ್ಪು ಮಾಹಿತಿ ನೀಡಿ ವಂಚಿಸಲಾಗುತ್ತಿದೆ ಎಂಬುದು. ರೀತಿಯ ಮೋಸದಿಂದ ಅನೇಕರು ತಮ್ಮ ಹಕ್ಕಿನ ಪಡಿತರವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಬೆಳವಣಿಗೆಯ ಹಿನ್ನೆಲೆಯಲ್ಲಿ ಜಯ ಕರ್ನಾಟಕ ಸಂಘಟನೆಯ ಸದಸ್ಯರು ತಹಶೀಲ್ದಾರರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಜೊತೆಗೆ, ನ್ಯಾಯಬೆಲೆ ಅಂಗಡಿಗೆ ಎಸ್ಸಿ/ಎಸ್ಟಿ ವಿವಿಧ್ಯೋಶ ಸಂಘದ ಹೆಸರಿನಲ್ಲಿ ನೀಡಿರುವ ಪರವಾನಗಿಯನ್ನು ತಕ್ಷಣ ರದ್ದುಪಡಿಸಿ, ಅರ್ಹ ಮತ್ತು ಪ್ರಾಮಾಣಿಕ ವ್ಯಕ್ತಿಗಳಿಗೆ ಹೊಸ ಪರವಾನಗಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅಕ್ರಮ ಪಡಿತರ ಕಳ್ಳ ಸಾಗಾಣಿಕೆಯಲ್ಲಿ ತೊಡಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಕಟ್ಟು ನಿಟ್ಟಿನ ಮೇಲ್ವಿಚಾರಣೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಜಯ ಕರ್ನಾಟಕ ಸಂಘಟನೆಯ ಚಾಲಕರ ಅಧ್ಯಕ್ಷ ವೆಂಕಟೇಶ ನಾಯಕ ಬಿಚ್ಚುಗತ್ತಿ, ಶರಣಬಸವ (ಲಕ್ಷ್ಮೀಪುರ), ಹಣಮಂತ ನಾಯಕ ಮಾಲಿಪಾಟೀಲ, ಬಸ್ಸು ಭಜಂತ್ರಿ, ನಾಡಗೌಡ ಅಮ್ಮಾಪೂರು ಸೇರಿದಂತೆ ಹಲವರು ಭಾಗವಹಿಸಿದ್ದರು. ಸಂಘಟನೆಯ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಿಗಳ ಕ್ರಮ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಗನ ಕೊಲೆಯ ಸೇಡು: ರಣಚಂಡಿಯಾದ ಹೆತ್ತವಳು! ರಕ್ತಕ್ಕೆ ರಕ್ತವೆಂದು 12 ವರ್ಷಗಳ ಬಳಿಕ ಮುಹೂರ್ತ ಇಟ್ಟ ತಾಯಿ!₹281.48 ಕೋಟಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯಲ್ಲಿ ಅಕ್ರಮ ಆರೋಪ; ಸರ್ಕಾರದ ತನಿಖೆಗೆ ಆಗ್ರಹಫ್ರೀಡಂ ಹಬ್ಬದಲ್ಲಿ ‘ಮೋದಿ ಮೋದಿ’ ಘೋಷಣೆ; ಡಿಕೆಶಿ ಮಾತಿನಲ್ಲೇ ಜನರಿಗೆ ಟಾಂಗ್ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚಂದ್ರಶೇಖರ ದಂಡಿನ ಆಯ್ಕೆ ಮಾಡುವಂತೆ ಸಿದ್ದು ತುಮಕೂರು ಆಗ್ರಹನಕಲಿ ಎನ್‌ಕೌಂಟರ್ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ: ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಮನವಿಹಳಿಸಗರ ಸರ್ಕಾರಿ ಶಾಲೆಯ ದುಸ್ಥಿತಿ: ಪುಟಾಣಿಗಳ ಜೀವದೊಂದಿಗೆ ಚೆಲ್ಲಾಟ; ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಅನಾಹುತ ತಪ್ಪದುಗೃಹ ಸಚಿವರ ಘೋಷಣೆಗೆ ಸವಾಲೇ? ಶಹಾಪುರದಲ್ಲಿ ಮತ್ತೆ ಜೋರಾದ ಅಕ್ರಮ ಮರಳು ಸಾಗಾಟಒಂದು ವಾರದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಿ: ಇಲ್ಲದಿದ್ದರೆ ಬೃಹತ್ ಪ್ರತಿಭಟನೆ – ಕರ್ನಾಟಕ ಪ್ರಾಂತ ರೈತ ಸಂಘ ಎಚ್ಚರಿಕೆಕೆನಾಲ್ ಒಡೆದು ಸಾವಿರಾರು ಲೀಟರ್ ನೀರು ಪೋಲು: ರೈತರ ಜಮೀನು ಜಲಾವೃತ, ಕೆಬಿಜೆಎನ್ಎಲ್ ಅಧಿಕಾರಿಗಳ ವಿರುದ್ಧ ಕರ್ತವ್ಯಲೋಪದ ಆರೋಪನಾರಾಯಣಪುರ ಬಲದಂಡೆ ಕಾಲುವೆ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ: ತಕ್ಷಣ ನಿರ್ವಹಣೆಗೆ ರೈತ ಸಂಘ ಆಗ್ರಹ