LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌..!!

ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ಇದು ಗಂಭೀರ ವಿಷಯವಾಗಿದೆ ಎಂದು ಸಹಮತ ವ್ಯಕ್ತಪಡಿಸಿದರು. ಅಲ್ಲದೆ, ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಬಗ್ಗೆ ಯೋಚಿಸಲಾಗುವುದು ಎಂದರು.

ಈ ನಿಟ್ಟಿನಲ್ಲಿ ಫಿನ್​ಲ್ಯಾಂಡ್ ಈಗಾಗಲೇ ಕ್ರಮ ಕೈಗೊಂಡಿದೆ, ಬ್ರಿಟನ್ ಚಿಂತನೆ ನಡೆಸುತ್ತಿದೆ. ಆಸ್ಟ್ರೇಲಿಯಾ ಎರಡು ತಿಂಗಳ ಹಿಂದೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಿತು. ಕೃತಕ ಬುದ್ಧಿಮತ್ತೆ ಮತ್ತು ಸಾಮಾಜಿಕ ಮಾಧ್ಯಮದ ಜವಾಬ್ದಾರಿಯುತ ಬಳಕೆಗಾಗಿ ‘ಡಿಜಿಟಲ್ ಡಿಟಾಕ್ಸಿಫಿಕೇಷನ್’ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಐಟಿ-ಬಿಟಿ ಇಲಾಖೆ ಮೆಟಾ ಸಹಯೋಗದೊಂದಿಗೆ ಮೂರು ಲಕ್ಷಕ್ಕೂ ಹೆಚ್ಚು ಮಕ್ಕಳು ಮತ್ತು ಒಂದು ಲಕ್ಷ ಶಿಕ್ಷಕರನ್ನು ಒಳಗೊಂಡಂತೆ ಈ ಕಾರ್ಯ ನಡೆಸುತ್ತಿದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಡಿಜಿಟಲ್ ವ್ಯಸನದಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸಹಾಯ ಮಾಡಲು 2025ರ ಮಾರ್ಚ್​​ನಲ್ಲಿ ‘ಬಿಯಾಂಡ್ ಸ್ಕ್ರೀನ್ಸ್’ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಡಿಜಿಟಲ್ ಡಿಟಾಕ್ಸ್ ಸೆಂಟರ್ ಮತ್ತು ಇಲಾಖೆಯ ಅಧಿಕೃತ ವೆಬ್‌ಸೈಟ್ ಉದ್ಘಾಟಿಸಿದ ನಂತರ GAFX 2025 ಶೃಂಗಸಭೆಯಲ್ಲಿ ಈ ಉಪಕ್ರಮವನ್ನು ಘೋಷಿಸಲಾಗಿತ್ತು. ಡಿಟಾಕ್ಸ್ ಸೆಂಟರ್ ಎಂಬುದು ಆರೋಗ್ಯಕರ ಡಿಜಿಟಲ್ ಬಳಕೆಗಾಗಿ ಸಂಪನ್ಮೂಲಗಳು, ಸಮಾಲೋಚನೆ ಇತ್ಯಾದಿಗಳಿಗೆ ಮೀಸಲಾದ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ.

ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಗೆ ವಯಸ್ಸಿನ ಆಧಾರಿತ ನಿರ್ಬಂಧವನ್ನು ವಿಧಿಸುವಂತೆ ಗುರುವಾರ ಲೋಕಸಭೆಗೆ ಸಲ್ಲಿಸಲಾದ 2025-26ರ ಆರ್ಥಿಕ ಸಮೀಕ್ಷೆಯಲ್ಲಿ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂಬುದನ್ನು ಸದನದಲ್ಲಿ ಸುರೇಶ್ ಕುಮಾರ್ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026