Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರೈತರಿಗೆ ಮಣ್ಣಿನ ಆರೋಗ್ಯ ಜಾಗೃತಿ ಶಿಬಿರ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತೂಬಗೆರೆ ಹೋಬಳಿ ಶಿರವಾರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅವರಣದಲ್ಲಿ ( ಆರ್ ಎ ಡಬ್ಲ್ಯೂ ಇ ಪಿ.) ಕಾರ್ಯಕ್ರಮದಲ್ಲಿ  ಮಣ್ಣಿನ ಮಾದರಿ ಸಂಗ್ರಹಣೆ ಹಾಗೂ ಮಣ್ಣಿನ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ನಮ್ಮ ವಿಶ್ವವಿದ್ಯಾಲಯದ ವತಿಯಿಂದ ರೈತರ ಜಮೀನುಗಳಿಂದ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿ ಮಣ್ಣಿನ ಪರೀಕ್ಷೆಗೆ ಕಳುಹಿಸಲಾಯಿತು. ಮಣ್ಣಿನ ಫಲವತ್ತತೆಯನ್ನು ತಿಳಿದುಕೊಂಡು ಬೆಳೆಗಳಿಗೆ ಅಗತ್ಯವಾದ ಗೊಬ್ಬರಗಳನ್ನು ವೈಜ್ಞಾನಿಕವಾಗಿ ಶಿಫಾರಸು ಮಾಡುವ ಉದ್ದೇಶದಿಂದ ಈ ಕಾರ್ಯವನ್ನು ಕೈಗೊಳ್ಳಲಾಯಿತು.

ನಮ್ಮ ವಿಶ್ವವಿದ್ಯಾಲಯದ ಮಣ್ಣು ವಿಜ್ಞಾನ ವಿಭಾಗದ ಡಾ. ಪ್ರೀತು ಅವರು ಮಾತನಾಡಿ   ರೈತರಿಗೆ ಮಣ್ಣಿನ ಮಾದರಿಯನ್ನು ಸರಿಯಾದ ರೀತಿಯಲ್ಲಿ ಹೇಗೆ ಸಂಗ್ರಹಿಸಬೇಕು, ಮಣ್ಣಿನ ಪರೀಕ್ಷೆಯ ಮಹತ್ವ, ಮಣ್ಣಿನ ಪರೀಕ್ಷೆಯಿಂದ ದೊರೆಯುವ ಪ್ರಯೋಜನಗಳು ಹಾಗೂ ಸಮತೋಲನ ಗೊಬ್ಬರ ನಿರ್ವಹಣೆಯ ಬಗ್ಗೆ ವಿವರವಾಗಿ ತಿಳಿಸಿದರು.

 ಬೀಜ ವಿಜ್ಞಾನ ವಿಭಾಗದ ಡಾ. ಸಿದ್ದರಾಜು ಅವರು ಮಾತನಾಡಿ ಉತ್ತಮ ಗುಣಮಟ್ಟದ ಪ್ರಮಾಣಿತ ಬೀಜಗಳ ಬಳಕೆ, ಹೊಸ ತಳಿಗಳ ಪರಿಚಯ, ರೋಗ ನಿರೋಧಕ ಹಾಗೂ ರೋಗಕ್ಕೆ ತುತ್ತಾಗುವ ತಳಿಗಳು, ಉತ್ತಮ ಬೀಜಗಳ ಆಯ್ಕೆ, ಬೀಜ ಸಂಸ್ಕರಣೆ ಹಾಗೂ ಉತ್ತಮ ಬೆಳೆ ಉತ್ಪಾದನೆಗೆ ಅಗತ್ಯವಾದ ವಿವಿಧ ಮಾಹಿತಿಗಳನ್ನು ರೈತರಿಗೆ ವಿವರಿಸಿದರು.

 RAWEP  ಉಸ್ತುವಾರಿ ಅಧಿಕಾರಿ ಡಾ. ಸವಿತಾ  ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ರೈತರು ಮಣ್ಣಿನ ಪರೀಕ್ಷೆಯನ್ನು ನಿಯಮಿತವಾಗಿ ಮಾಡಿಸಿಕೊಳ್ಳಬೇಕು ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ರೈತರಿಗೆ ಮಣ್ಣಿನ ಆರೋಗ್ಯ, ಸಮತೋಲನ ಪೋಷಕಾಂಶ ನಿರ್ವಹಣೆ, ಉತ್ತಮ ಬೀಜಗಳ ಆಯ್ಕೆ ಹಾಗೂ ಆಧುನಿಕ ಕೃಷಿ ತಂತ್ರಜ್ಞಾನಗಳ ಕುರಿತು ಅರಿವು ಮೂಡಿಸುವಲ್ಲಿ ಕಾರ್ಯಕ್ರಮ ಅತ್ಯಂತ  ಯಶಸ್ವಿಯಾಯಿತು.

 ಕಾರ್ಯಕ್ರಮದಲ್ಲಿ ಗ್ರಾಮದ ಅನೇಕ ರೈತರು  ಗ್ರಾಮಸ್ಥರು ಕೃಷಿ ವಿಶ್ವವಿದ್ಯಾಲಯ  ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ