Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶಾಸಕರ ಸದಸ್ಯತ್ವ ರದ್ದುಗೊಳಿಸುವ ಅಧಿಕಾರ ಸ್ಪೀಕರ್‌ಗೆ ಇಲ್ಲ: ಯು.ಟಿ. ಖಾದರ್

ಬೆಂಗಳೂರು: ವಿಧಾನಸಭೆ ಸದಸ್ಯರ ಸದಸ್ಯತ್ವವನ್ನು ರದ್ದುಪಡಿಸುವ ಅಧಿಕಾರ ಸ್ಪೀಕರ್‌ಗೆ ಇಲ್ಲ ಎಂದು ಸ್ಪೀಕರ್ ಯು.ಟಿ. ಖಾದರ್ (UT Khader) ತಿಳಿಸಿದ್ದಾರೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಕೋರ್ಟ್ ಶಾಸಕ ವಿನಯ್ ಕುಲಕರ್ಣಿ (Vinay Kulkarni) ಅಪರಾಧಿ ಎಂದು ತೀರ್ಪು ನೀಡಿದ ಹಿನ್ನೆಲೆಯಲ್ಲಿ, ಶಾಸಕ ಸ್ಥಾನ ರದ್ದುಪಡಿಸದ ಬಗ್ಗೆ ಬಸವರಾಜ ಕೊರವರ ಸಲ್ಲಿಸಿದ್ದ ಮನವಿಗೆ ಸಂಬಂಧಿಸಿ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಯಾವೊಬ್ಬ ಸದಸ್ಯನ ಸದಸ್ಯತ್ವವನ್ನು ರದ್ದು ಮಾಡುವ ಅಧಿಕಾರ ಸ್ಪೀಕರ್‌ಗೆ ಇರುವುದಿಲ್ಲ. ಇದು ಎಲ್ಲಾದರೂ ಇರುವ ನಿಯಮವೇ? ವಿಧಾನಸಭೆಯ ವ್ಯಾಪ್ತಿಯಲ್ಲಿ ನಡೆದ ಘಟನೆಗಳಿಗೆ ಮಾತ್ರ ಸ್ಪೀಕರ್‌ಗೆ ಅಧಿಕಾರವಿದೆ ಎಂದು ಅವರು ಹೇಳಿದರು. ನಿಯಮದ ಪ್ರಕಾರ ಯಾರಾದರೂ ಶಿಕ್ಷೆಗೆ ಒಳಪಟ್ಟರೆ ಅವರು ಅನರ್ಹರಾಗುತ್ತಾರೆ (Deemed to be disqualified). ಅದು ಸ್ವಯಂಚಾಲಿತವಾಗಿ ಜಾರಿಗೆ ಬರುತ್ತದೆ; ನಾವು ಕೇವಲ ಮಾಹಿತಿ ನೀಡುವ ಕೆಲಸ ಮಾತ್ರ ಮಾಡಬಹುದು ಎಂದರು.

ಇದೇ ಕುರಿತು ಕಾರ್ಯದರ್ಶಿಗೆ ಪರಿಶೀಲನೆ ಮಾಡಲು ಸೂಚಿಸಿದ್ದೇನೆ ಎಂದು ತಿಳಿಸಿದ ಅವರು, ಒಂದು ಅಥವಾ ಎರಡು ದಿನ ವಿಳಂಬವಾದರೂ ಅದಕ್ಕೆ ವಿಶೇಷ ಅರ್ಥವಿಲ್ಲ ಎಂದರು. ಇದು ತನ್ನಿಂದ ತಾನೇ ರದ್ದಾಗುವ ಪ್ರಕ್ರಿಯೆಯಾಗಿದ್ದು, ತಡೆಯಾಜ್ಞೆ (ಸ್ಟೇ) ಬಂದರೆ ಮಾತ್ರ ಮತ್ತೆ ಪುನಃ ಸ್ಥಿತಿ ಬದಲಾಗುತ್ತದೆ ಎಂದು ಹೇಳಿದರು. ನಮ್ಮ ಪಾತ್ರ ಕೇವಲ ಇಂಟಿಮೇಶನ್ ನೀಡುವುದಷ್ಟೇ ಎಂದು ಸ್ಪಷ್ಟಪಡಿಸಿದರು. ಕಾನೂನು ಪ್ರಕಾರ ಆದೇಶ ಬಂದಾಗಲೇ ಸದಸ್ಯತ್ವ ಸ್ವಯಂಚಾಲಿತವಾಗಿ ರದ್ದಾಗುತ್ತದೆ ಎಂದು ತಿಳಿಸಿದರು. ಇಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಎಂಬ ಯಾವುದೇ ತಾರತಮ್ಯ ಮಾಡಿಲ್ಲ ಎಂದು ಅವರು ಹೇಳಿದರು.

ಇದರಲ್ಲಿ ಯಾವುದೇ ಪಕ್ಷಪಾತ ಇಲ್ಲ. ಸ್ವಯಂಚಾಲಿತವಾಗಿ ರದ್ದಾದ ನಂತರ ಮತ್ತೇನು ಕ್ರಮ ತೆಗೆದುಕೊಳ್ಳುವುದು? ಅವರು ಸಭೆಗೆ ಹಾಜರಾಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಮಾಹಿತಿ ಇಲ್ಲದವರಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ