LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ NWKRTC ಯಿಂದ ವಿಶೇಷ ಬಸ್ ವ್ಯವಸ್ಥೆ….!



ಬೆಳಗಾವಿ:   ಜಿಲ್ಲೆಯ ಸೌದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತಾದಿಗಳಿಗೆ ಗುಡ್ನ್ಯೂಸ್ ಕೊಡಲಾಗಿದೆ. ಬೆಳಗಾವಿ ಜಿಲ್ಲೆಯ ಸೌದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಜಾತ್ರೆಗೆ ಹೋಗುವ ಭಕ್ತಾದಿಗಳು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಫೆಬ್ರವರಿ 9 ರಿಂದ 28 ರವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಅಲ್ಲದೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಪ್ರಯಾಣಿಕರ ಅನುಕೂಲಕ್ಕಾಗಿ ಇನ್ನಷ್ಟು ಸೇವೆಗಳನ್ನು ಪರಿಚಯಿಸಿದೆ. ಅದರ ವಿವರ ಇಲ್ಲಿದೆ.

ಭಾರತ ಹುಣ್ಣಿಮೆಯ ಪ್ರಯುಕ್ತ ಬೆಳಗಾವಿ ಜಿಲ್ಲೆಯ ಸೌದತ್ತಿಯ ಯಲ್ಲಮ್ಮನ ಗುಡ್ಡದಲ್ಲಿರುವ ಶ್ರೀ ರೇಣುಕಾ ದೇವಿ ಜಾತ್ರೆಯು ವೈಭವದಿಂದ ಜರುಗಲಿದೆ. ಫೆಬ್ರವರಿ 12ರಂದು ಬುಧವಾರ ಹುಣ್ಣಿಮೆಯ ದಿನ ರಥೋತ್ಸವದ ಮುಖ್ಯ ದಿನಾವಾಗಿದೆ. ಈ ಜಾತ್ರೆಗೆ ಹುಬ್ಬಳ್ಳಿ-ಧಾರವಾಡ ಅವಳಿನಗರ, ನವಲಗುಂದ ಹಾಗೂ ಸುತ್ತಮುತ್ತಲಿನ ಊರುಗಳು, ಅಕ್ಕ ಪಕ್ಕದ ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದಾರೆ. ರಥೋತ್ಸವದ ಮುನ್ನಾ ದಿನಗಳಿಂದ ಆರಂಭವಾಗಿ ನಂತರದಲ್ಲಿ ದೇವಿಯ ವಾರದ ದಿನಗಳಾದ ಮಂಗಳವಾರ ಮತ್ತು ಶುಕ್ರವಾರಗಳಂದು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳ ಪ್ರಯಾಣ ನಿರೀಕ್ಷಿಸಲಾಗಿದೆ.

ಭಕ್ತಾದಿಗಳು ಜಾತ್ರೆಗೆ ಹೋಗಿ ಬರಲು ಅನುಕೂಲವಾಗುವಂತೆ ಫೆಬ್ರವರಿ 9ರಿಂದ ಫೆಬ್ರವರಿ 14 ರವರೆಗೆ ಹಾಗೂ ನಂತರದಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರದ ದಿನ ಫೆಬ್ರವರಿ 18, 21,25 ಹಾಗೂ 28 ರಂದು ಹುಬ್ಬಳ್ಳಿ ಮತ್ತು ನವಲಗುಂದದಿಂದ ಯಲ್ಲಮ್ಮನ ಗುಡ್ಡಕ್ಕೆ ನೇರವಾಗಿ ಜಾತ್ರೆ ವಿಶೇಷ ಬಸ್ಗಳ ವ್ಯವಸ್ಥೆ ಮಾಡುವ ಮೂಲಕ ಗುಡ್ನ್ಯೂಸ್ ಕೊಡಲಾಗಿದೆ. ಇದಕ್ಕಾಗಿ 60 ಬಸ್ಗಳು, 150 ಚಾಲಕರು- ನಿರ್ವಾಹಕರು, ಮೇಲ್ವಿಚಾರಣೆಗಾಗಿ 8 ಅಧಿಕಾರಿಗಳು ಹಾಗೂ 22 ಸಿಬ್ಬಂದಿಗಳನ್ನು ನಿಯೋಜಿಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆಗೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುವುದು ಎಂದೂ ಹೇಳಲಾಗಿದೆ. ಬಸ್ ಹೊರಡುವ ಸ್ಥಳ ಹಾಗೂ ಸಂಚಾರ ಮಾರ್ಗದ ವಿವರ * ಹುಬ್ಬಳ್ಳಿಯಲ್ಲಿ ಜಾತ್ರೆ ವಿಶೇಷ ಬಸ್ಸುಗಳು ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ಹೊರಡುತ್ತವೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಆಯಾ ಬಸ್ ನಿಲ್ದಾಣಗಳ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ. ಪ್ರಯಾಣಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಹೊಸೂರು ಬಸ್ ನಿಲ್ದಾಣ: 7760991662 / 7760991685 | ಗೋಕುಲ ರಸ್ತೆ ಬಸ್ ನಿಲ್ದಾಣ : 7760991682 | ನವಲಗುಂದ : 9663299001





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷ ನಾನೇ ಸಿಎಂ: ಸಿದ್ದರಾಮಯ್ಯದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!