Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bagalkot

ಮುದ್ದೇಬಿಹಾಳದಲ್ಲಿ ಬರಗಾಲ ನಿವಾರಣೆಗಾಗಿ ದುರ್ಗಾದೇವಿಗೆ ವಿಶೇಷ ಪೂಜೆ

ನಾಡಹಬ್ಬದ ಪ್ರಯುಕ್ತ ಹೋಮ-ಹವನ: ನಾಡಿನಲ್ಲಿ ಸುಭಿಕ್ಷೆ, ಮಳೆ-ಬೆಳೆ ಸಮೃದ್ಧಿಗಾಗಿ ಪ್ರಾರ್ಥನೆ

ಮುದ್ದೇಬಿಹಾಳ:  ತಾಲೂಕಿನಲ್ಲಿ ಈ ವರ್ಷ ಮಳೆಯ ಕೊರತೆಯಿಂದ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಹಾಗೂ ಜಾನುವಾರುಗಳಿಗೆ ಯಾವುದೇ ತೊಂದರೆಯಾಗದಿರಲಿ, ನಾಡಿನಲ್ಲಿ ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಚೇತರಿಸಿಕೊಳ್ಳಲಿ ಹಾಗೂ ಸಕಲ ಜನರ ಬದುಕಿನಲ್ಲಿ ಸುಖ-ಶಾಂತಿ ನೆಲೆಸಲಿ ಎಂಬ ಆಶಯದೊಂದಿಗೆ ನಾಡಹಬ್ಬದ ಪ್ರಯುಕ್ತ ಪಟ್ಟಣದ ದುರ್ಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಹೋಮ-ಹವನ ನೆರವೇರಿಸಲಾಯಿತು.
ಪಟ್ಟಣದ ದುರ್ಗಾದೇವಿ ದೇವಸ್ಥಾನದಲ್ಲಿ ಸೋಮವಾರ ಬೆಳಿಗ್ಗೆ ಸಮಿತಿಯ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ದಸರಾ ಸಮಿತಿಯ ಪ್ರಮುಖರಾದ ಜೋಹಿತರಾಮ ಸಾಲಂಕಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ತಾಲೂಕಿನಲ್ಲಿ ಇಂತಹ ತೀವ್ರ ಬರಗಾಲದ ಪರಿಸ್ಥಿತಿ ಕಂಡುಬಂದಿರಲಿಲ್ಲ. ಆದರೆ ಈ ವರ್ಷ ಮಳೆಯ ಅಭಾವದಿಂದಾಗಿ ಬರದ ಆತಂಕ ಎದುರಾಗಿದ್ದು, ರೈತರು ಸೇರಿದಂತೆ ಸಾರ್ವಜನಿಕರು ಸಂಕಷ್ಟ ಅನುಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ನಾಡಹಬ್ಬದ ಶುಭ ಸಂದರ್ಭದಲ್ಲಿ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಹೋಮ-ಹವನ ನೆರವೇರಿಸುವ ಮೂಲಕ ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಲಾಗಿದೆ ಎಂದು ತಿಳಿಸಿದರು.
ಉತ್ಸವ ಮೂರ್ತಿಗೆ ಪ್ರಾರ್ಥನೆ:
ಕಳೆದ ಮೂರು ವರ್ಷಗಳ ಹಿಂದೆ ಪಟ್ಟಣದಲ್ಲಿ ರಾಜಸ್ಥಾನದ ಹತ್ತಿರದ ಅಬುರೋಡ ಎಂಬ ಗ್ರಾಮದಿಂದ   ಶ್ರೀದುರ್ಗಾ ದೇವಿ ಉತ್ಸವ ಮೂರ್ತಿಯನ್ನು ತಯ್ಯಾರಿಸಿ ಪ್ರತಿಷ್ಠಾಪನೆ ಮಾಡಿದ್ದು ಮೂರು ವರ್ಷಗಳಿಂದಲೂ ನಾಡಹಬ್ಬದಣದು ವಿಶೇಷ ಪೂಜೆ ಸಲ್ಲಿಸುತ್ತಾ ಬರಲಾಗುತ್ತಿದೆ. ನಾಡಿನ ಸಂಸ್ಕೃತಿ, ಸಂಪ್ರದಾಯ ಹಾಗೂ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಹಬ್ಬ-ಹರಿದಿನಗಳ ಸಂದರ್ಭದಲ್ಲಿ ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಜನರ ಸಂಕಷ್ಟ ದೂರವಾಗಿ, ಉತ್ತಮ ಮಳೆಯಾಗಿ ಕೆರೆ-ಕಟ್ಟೆಗಳು ತುಂಬಿ, ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಬೇಕು. ರೈತರು ಉತ್ತಮ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು. ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎಂಬ ಸಂಕಲ್ಪದೊಂದಿಗೆ ದೇವಿಗೆ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ಸಮೀತಿಯವರು ಹೇಳಿದರು.
ಕಾರ್ಯಕ್ರಮದಲ್ಲಿ ಶಂಕರಭಟ್ಟ ಜೋಷಿ ಅವರು ವಿಶೇಷ ಹೋಮ-ಹವನ ನೆರವೇರಿಸಿ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಭಕ್ತಿಭಾವದಿಂದ ನಡೆದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರು ದುರ್ಗಾದೇವಿಯ ದರ್ಶನ ಪಡೆದು ನಾಡಿನ ಸುಭಿಕ್ಷೆ, ಉತ್ತಮ ಮಳೆ-ಬೆಳೆ ಹಾಗೂ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಅರ್ಚಕರಾದ ಪ್ರಾಣೇಶ ಭಟ್ಟ, ಮಯೂರಸಿಂಗ್ ರಾಯಚೂರ, ಹಿರಿಯರಾದ ಅಶೋಕ ನಾಡಗೌಡ, ಪುಟ್ಟುಗೌಡ ಪಾಟೀಲ, ಉಮೇಶ ಕಂಠಿ, ನೀತಾ ರಾಯಚೂರ, ಪುಷ್ಪಾ ಪಾಟೀಲ ಊರಗೌಡರ, ಸಂತೋಷ ನಾಯ್ಕೋಡಿ, ಉಮೇಶ ಗಡ್ಡಿ, ಅಪ್ಪಣ್ಣ ಸಿದ್ದಾಪೂರ, ಶ್ರೀಶೈಲ ಅಮರಣ್ಣವರ, ಜ್ಯೋತಿ ಸಾಲಂಕಿ, ಗೋಪಿಕಾ ರಾಯಚೂರ, ಸಂಗಣ್ಣ ನಾಯ್ಕೋಡಿ, ಪೂರ್ವಿಕಾ ರಾಯಚೂರ, ಉದಯಸಿಂಗ್ ರಾಯಚೂರ, ರೂಪಾ ಕೆಂದೂಳಿ, ಮುತ್ತಣ್ಣ ಒಣರೊಟ್ಟಿ, ಸಂತೋಷ ಹೂಗಾರ ಸೇರಿದಂತೆ ಸಮಿತಿಯ ಸದಸ್ಯರು ಮತ್ತು ಭಕ್ತರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ