LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿಯ ಬದುಕಿಗೆ ಧರ್ಮಾಚರಣೆ ಅವಶ್ಯಕ ಶ್ರೀ ರಂಭಾಪುರಿ ಜಗದ್ಗುರುಗಳು

ಮೈಸೂರು – ಜೂನ್-9:
ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಆದರ್ಶ ಮೌಲ್ಯಗಳ ಅರಿವು ಆಚರಣೆ ಮುಖ್ಯ. ಶಾಂತಿ ನೆಮ್ಮದಿಯ ಬದುಕಿಗೆ ಧರ್ಮಾಚರಣೆ ಅವಶ್ಯಕವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಅವರು ಸೋಮವಾರ ಶ್ರೀರಾಮಪುರದ ಶಿವಭವನದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜಾ ಹಾಗೂ ಧರ್ಮ ಜಾಗೃತಿ ಸಮಾರಂಭದ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
ಮಾನವ ಜೀವನದಲ್ಲಿ ಧರ್ಮ ಅರ್ಥ ಕಾಮ ಮೋಕ್ಷ ಎಂಬ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸಿಕೊಳ್ಳದಿದ್ದರೆ ಮಾನವ ಜೀವನ ವ್ಯರ್ಥವಾಗುತ್ತದೆ. ಸುಖದ ಮೂಲ ಧರ್ಮದ ಆಚರಣೆಯಲ್ಲಿದೆ. ಅರಿತು ಆಚರಿಸಿ ಬಾಳುವುದೇ ನಿಜವಾದ ಧರ್ಮ ಎಂಬುದು ಅಶ್ವತವೃಕ್ಷ ಇದ್ದಂತೆ ಆ ವೃಕ್ಷದ ನೆರಳಿನಲ್ಲಿ ಸಕಲ ಜೀವರಾಶಿಗಳು ಬಾಳಿ ಬದುಕಿಸುವ ಶಕ್ತಿ ಇದೆ. ಶ್ರೀ ಜಗದ್ಗುರು ರೇಣುಕಾಚಾರ್ಯರು ಅಹಿಂಸಾದಿ ಧ್ಯಾನ ಪರ್ಯತರವಾದ ದಶಧರ್ಮ ಸೂತ್ರಗಳನ್ನು ಬೋಧಿಸಿ ಸಕಲರನ್ನು ಉದ್ದರಿಸಿದ್ದಾರೆ. ಇಷ್ಟಲಿಂಗಾರ್ಚನೆಯಿAದ ಸಂಕಷ್ಟಗಳು ದೂರವಾಗಿ ಇಷ್ಟಾರ್ಥ ಫಲಗಳು ಪ್ರಾಪ್ತವಾಗುತ್ತವೆ. ಶಿವನನ್ನು ಪೂಜಿಸಿದರೆ ಸಕಲ ದೇವಾನುದೇವತೆಗಳನ್ನು ಪೂಜಿಸಿದ ಪುಣ್ಯ ಫಲ ಪ್ರಾಪ್ತವಾಗುತ್ತದೆ. ವೈಚಾರಿಕತೆ ಹೆಸರಿನಲ್ಲಿ ಭಾರತೀಯ ಉತ್ಕೃಷ್ಟ ಸಂಸ್ಕೃತಿ ನಾಶಗೊಳ್ಳಬಾರದು. ಸತ್ಯ ಧರ್ಮದ ತಳಹದಿಯ ಮೇಲೆ ಮಾನವ ಜೀವನ ರೂಪಿತಗೊಂಡಾಗ ಬದುಕು ಸಮೃದ್ಧಗೊಳ್ಳುತ್ತದೆ. ಮೈಸೂರು ಮಹಾನಗರದಲ್ಲಿ ಇಷ್ಟಲಿಂಗ ಮಹಾಪೂಜೆ ಹಮ್ಮಿಕೊಂಡಿರುವುದು ಸಕಲ ಭಕ್ತರಿಗೆ ಹರುಷವನ್ನು ಉಂಟುಮಾಡಿದೆ. ಪ್ರತಿವರ್ಷ ಇಂಥ ಕಾರ್ಯಕ್ರಮಗಳು ಜರುಗಿದರೆ ಯುವ ಜನಾಂಗಕ್ಕೆ ಅರಿವು ಉಂಟಾಗಿ ಸನ್ಮಾರ್ಗದಲ್ಲಿ ನಡೆಯಲು ಸಹಕಾರವಾಗುವುದರಲ್ಲಿ ಯಾವುದೇ ಸಂದೇಹ ಇಲ್ಲ. ವಿರೂಪಾಕ್ಷ ಮತ್ತು ಶ್ರೀಮತಿ ವಿಜಯಮ್ಮ ಮತ್ತು ಮಕ್ಕಳು ಸಂಘಟಿಸಿದ ಈ ಕಾರ್ಯದಲ್ಲಿ ಶಿವಭವನದ ಅಧ್ಯಕ್ಷ ಮಹೇಶ್ ಮೊದಲ್ಗೊಂಡು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಸಹಕರಿಸಿರುವುದು ಅವರಲ್ಲಿರುವ ಧರ್ಮ ನಿಷ್ಠೆಗೆ ಸಾಕ್ಷಿಯಾಗಿದೆ ಎಂದರು.
ಅರಮನೆ ಜಪದಕಟ್ಟಿ ಮಠದ ಡಾ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಪ್ರಾಸ್ತಾವಿಕವಾಗಿ ಮಾತನಾಡಿದರು. ಹಂಪಸಾಗರ ನವಲಿ ಹಿರೇಮಠದ ಅಭಿನವ ಶಿವಲಿಂಗ ರುದ್ರಮುನಿ ಶಿವಾಚಾರ್ಯ ಸ್ವಾಮಿಗಳು ಉಪಸ್ಥಿತರಿದ್ದರು.
ವಿರೂಪಾಕ್ಷ, ಟಿ.ಟಿ.ಮಹೇಶ್, ಪ್ರಸನ್ನ ಕುಮಾರ್, ಆದಪ್ಪ ಶೆಟ್ಟರು, ಗಿರೀಶ ಎನ್.ಜಿ., ವೀರೇಶ, ಖಂಡೇಶ್, ಅಶೋಕ ಹಾಗೂ ಕುಮಾರಸ್ವಾಮಿ ಇದ್ದರು. ಹಲವಾರು ಗಣ್ಯರಿಗೆ ದಾನಿಗಳಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು. ಧನಗೂರು ಬೃಹನ್ಮಠದ ಮುಮ್ಮಡಿ ಷಡಕ್ಷರ ಶಿವಾಚಾರ್ಯ ಸ್ವಾಮಿಗಳು ನಿರೂಪಿಸಿದರು. ದಿನೇಶ್ ಶಾಸ್ತ್ರಿಗಳು ಸರ್ವರನ್ನು ಸ್ವಾಗತಿಸಿದರು.
ಸಮಾರಂಭಕ್ಕೂ ಮುನ್ನ ಶಿವಭವನದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜೆ ನೆರವೇರಿಸಿ ಸಕಲ ಭಕ್ತರಿಗೆ ಶುಭ ಹಾರೈಸಿದರು. ಸಮಾರಂಭದ ನಂತರ ಎಲ್ಲಾ ಭಕ್ತರಿಗೆ ಅನ್ನದಾಸೋಹ ಸೇವೆಯನ್ನು ಶ್ರೀ ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿಯವರು ಸಲ್ಲಿಸಿದರು.
ಸಿ.ಎಚ್. ಬಾಳನಗೌಡ್ರ
ವಾರ್ತಾ ಸಂಯೋಜನಾಧಿಕಾರಿ,
ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಸಂಸ್ಥಾನ ಪೀಠ, ಬಾಳೆಹೊನ್ನೂರು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು